ನಾಳೆ ರಾಜ್ಯಪಾಲರ ಕಲಬುರಗಿ ಜಿಲ್ಲಾ ಪ್ರವಾಸ

ಕಲಬುರಗಿ :   ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಬೆಂಗಳೂರಿನಿಂದ ಸ್ಟಾರ್ ಏರ್ ವಿಮಾನದ ಮೂಲಕ ಜುಲೈ 27 ರಂದು ಗುರುವಾರ ಬೆಳಿಗ್ಗೆ 9.45 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.

ನಂತರ ಅಂದು ಬೆಳಿಗ್ಗೆ 10 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣದಿಂದ ರಸ್ತೆ ಮೂಲಕ ರಾಯಚೂರಿನ ಕೃಷಿ ವಿಜ್ಞಾನ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡುವರು. ನಂತರ ರಾತ್ರಿ ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡುವರು.

ಜುಲೈ 28 ರಂದು ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ 12ನೇ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 12 ಗಂಟೆಗೆ ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಹೊರಟು ಮಧ್ಯಾಹ್ನ 2.30 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಮಧ್ಯಾಹ್ನ 3.05 ಗಂಟೆಗೆ ಕಲಬುರಗಿಯಿಂದ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು ಎಂದು ಪ್ರಕಟಣೆ ತಿಳಿಸಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read