ಶಿವಮೊಗ್ಗ : ಇಂದು ದೇಶದ 2 ನೇ ಅತಿ ಉದ್ದದ ಸಿಗಂದೂರು ಕೇಬಲ್ ಸೇತುವೆ ಲೋಕಾರ್ಪಣೆಗೊಳ್ಳಲಿದೆ
ಹೌದು, ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಇರುವ ಪ್ರಸಿದ್ಧ ಯಾತ್ರಾಸ್ಥಳ ಸಿಗಂದೂರು ಸೇತುವೆಗೆ ಇಂದು ಚಾಲನೆ ಸಿಗಲಿದೆ.
ಇಂದು ಬೆಳಗ್ಗೆ 10:30 ಕ್ಕೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಸೇತುವೆ ಲೋಕಾರ್ಪಣೆಗೊಳಿಸಲಿದ್ದಾರೆ. ನಂತರ ಅವರು ಸಿಗಂಧೂರು ಚೌಡೇಶ್ವರಿ ದೇವಾಲಯಕ್ಕೆ ತೆರಳಿ ದೇವಿಯ ದರ್ಶನ ಪಡೆದು ನಂತರ ಸಾಗರದ ನೆಹರೂ ಮೈದಾನದಲ್ಲಿ ನಡೆಯಲಿರುವ ಸಾರ್ವಜನಿಕ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಸಂಸದ ಪ್ರಹ್ಲಾದ್ ಜೋಶಿ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಬರೋಬ್ಬರಿ 470 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗಿರುವ ದೇಶದ 2 ನೇ ಅತಿ ಉದ್ದದ ಕೇಬಲ್ ಆಧಾರಿತ ಸೇತುವೆ ಇದಾಗಿದೆ. ಈ ಸೇತುವೆಯ ಕಾಮಗಾರಿ 2020 ರ ಡಿಸೆಂಬರ್ ನಲ್ಲಿ ಆರಂಭವಾಗಿತ್ತು.
ಸಿಗಂದೂರು ಸೇತುವೆ 2.44 ಕಿ.ಮೀ. ಉದ್ದವಿದೆ. ಇದರಲ್ಲಿ 740 ಮೀಟರ್ ಮಾತ್ರ ಕೇಬಲ್ ಸೇತುವೆ ಇದೆ. 30ರಿಂದ 55 ಮೀಟರ್ ಎತ್ತರದ 17 ಪಿಲ್ಲರ್ಗಳಿವೆ. ಇದು ದ್ವಿಪಥ ಹೊಂದಿದ್ದು, 2 ಕಡೆ 1.5 ಮೀಟರ್ ಅಗಲದ ಪುಟ್ಪಾತ್ ಕೂಡ ಇದೆ. ಸೇತುವೆ ನಿರ್ಮಾಣಕ್ಕೆ 423.15 ಕೋಟಿ ರೂ. ವೆಚ್ಚವಾಗಿದೆ.
ಸಿಗಂದೂರು’ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಇರುವ ಪ್ರಸಿದ್ಧ ಯಾತ್ರಾಸ್ಥಳ. ಚೌಡೇಶ್ವರಿ ಅಮ್ಮನವರು ಇಲ್ಲಿ ನೆಲೆನಿಂತು ಭಕ್ತರನ್ನು ಹರಸುತ್ತಾಳೆ. ತಾಯಿಯನ್ನು ಸಿಗಂದೂರೇಶ್ವರಿ ಎಂದೂ ಕರೆಯುತ್ತಾರೆ.