HomeLatest NewsBREAKING : ನಾಳೆ ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಟಾಕ್ಸಿಕ್' ಚಿತ್ರದ 2 ನೇ ಟೀಸರ್...

BREAKING : ನಾಳೆ ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರದ 2 ನೇ ಟೀಸರ್ ರಿಲೀಸ್.!

ಬೆಂಗಳೂರು :   ಕೆಜಿಎಫ್-2 ಯಶಸ್ಸಿನ ನಂತರ ಇಡೀ ದೇಶವೇ ಕಾತರದಿಂದ ಕಾಯುತ್ತಿರುವ ಸಿನಿಮಾ ಎಂದರೆ ಅದು ಯಶ್ ನಟನೆಯ ‘ಟಾಕ್ಸಿಕ್’. ಚಿತ್ರದ ಪ್ರಚಾರ ಯಾವಾಗ ಆರಂಭವಾಗುತ್ತದೆ ಎಂದು ಕಾದು ಕುಳಿತಿದ್ದ ಅಭಿಮಾನಿಗಳಿಗೆ ಚಿತ್ರತಂಡ ಈಗ ಸಿಹಿ ಸುದ್ದಿ ನೀಡಿದೆ. ಫೆಬ್ರವರಿ 20ರ ಶುಕ್ರವಾರ (ನಾಳೆ) ಬೆಳಗ್ಗೆ ಸರಿಯಾಗಿ 9:35ಕ್ಕೆ ಚಿತ್ರದ ಹೊಸ ಟೀಸರ್ ಬಿಡುಗಡೆಯಾಗಲಿದೆ.

ಹೌದು.   ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ ದಿನ ಬಂದೇ ಬಿಟ್ಟಿದೆ. ಗೀತು ಮೋಹನ್ ದಾಸ್ ನಿರ್ದೇಶನದ ‘ಟಾಕ್ಸಿಕ್’ ಚಿತ್ರತಂಡದಿಂದ ನಾಳೆ 2ನೇ ಟೀಸರ್ (Teaser 2) ಅಧಿಕೃತವಾಗಿ ಬಿಡುಗಡೆಯಾಗಲಿದೆ.

ನಾಳೆ (ಫೆಬ್ರವರಿ 20)  ಶುಕ್ರವಾರ  ಬೆಳಗ್ಗೆ ಸರಿಯಾಗಿ 9:35ಕ್ಕೆ ಟಾಕ್ಸಿಕ್ ಚಿತ್ರದ ಟೀಸರ್ ರಿಲೀಸ್ ಆಗಲಿದೆ.   ಕಳೆದ ಬಾರಿ ಬಿಡುಗಡೆಯಾಗಿದ್ದ ಟೈಟಲ್ ಟೀಸರ್ ಜಾಗತಿಕ ಮಟ್ಟದಲ್ಲಿ ಸದ್ದು ಮಾಡಿತ್ತು. ಈಗ ಎರಡನೇ ಟೀಸರ್ ಮೂಲಕ ಚಿತ್ರತಂಡ ಯಾವ ರೀತಿಯ ಸರ್ಪ್ರೈಸ್ ನೀಡಲಿದೆ ಎಂಬ ಕುತೂಹಲ ಎಲ್ಲರಲ್ಲಿದೆ. ಯಶ್ ಅವರ ಹೊಸ ಲುಕ್ ಮತ್ತು ಸಿನಿಮಾದ ಶೈಲಿ ಹೇಗಿರಲಿದೆ ಎಂಬುದಕ್ಕೆ ನಾಳೆ ಉತ್ತರ ಸಿಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿರ್ಮಾಣ ಸಂಸ್ಥೆಯಾದ ಕೆವಿಎನ್ ಪ್ರೊಡಕ್ಷನ್ಸ್ (KVN Productions) ಮತ್ತು ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್ ಇಂದು ಹೊಸ ಪೋಸ್ಟರ್ ಒಂದನ್ನು ಹಂಚಿಕೊಳ್ಳುವ ಮೂಲಕ ಈ ವಿಚಾರವನ್ನು ಖಚಿತಪಡಿಸಿವೆ. ಈ ಪೋಸ್ಟರ್‌ನಲ್ಲಿ ಯಶ್ ಅವರು ಹಿಮದ ಹೊದಿಕೆಯ ಮೇಲೆ ರಕ್ತಸಿಕ್ತ ರಣಭೂಮಿಯಲ್ಲಿ ನಿಂತಿರುವಂತೆ ಕಾಣುತ್ತಿದ್ದು, ಸಿನಿಮಾದ ಮೇಲೆ ಭಾರಿ ಕುತೂಹಲ ಮೂಡಿಸಿದೆ.

ಸಿನಿಮಾದ ವಿಶೇಷತೆಗಳೇನು?

ಈ ಸಿನಿಮಾ 1940 ರಿಂದ 1970ರ ಕಾಲಘಟ್ಟದ ಗೋವಾದ ಮಾಫಿಯಾ ಪ್ರಪಂಚದ ಕಥೆಯನ್ನು ಒಳಗೊಂಡಿದೆ ಎಂದು ಹೇಳಲಾಗುತ್ತಿದೆ. ಯಶ್ ಇಲ್ಲಿ ‘ರಾಯ’ ಎಂಬ ಹೆಸರಿನ ಪವರ್‌ಫುಲ್ ಗ್ಯಾಂಗ್‌ಸ್ಟರ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದಲ್ಲಿ ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಶಿ, ರುಕ್ಮಿಣಿ ವಸಂತ್ ಮತ್ತು ತಾರಾ ಸುತಾರಿಯಾ ಅವರಂತಹ ದೊಡ್ಡ ತಾರಾಗಣವಿದೆ.ಈ ಆಕ್ಷನ್ ಥ್ರಿಲ್ಲರ್ ಸಿನಿಮಾ ಮಾರ್ಚ್ 19, 2026 ರಂದು ಯುಗಾದಿ ಹಬ್ಬದ ಸಂದರ್ಭದಲ್ಲಿ ಜಗತ್ತಿನಾದ್ಯಂತ ಬಿಡುಗಡೆಯಾಗಲಿದೆ.

ಟ್ರೇಲರ್ ಯಾವಾಗ?

ಟೀಸರ್ ಬಿಡುಗಡೆಯಾದ ಬೆನ್ನಲ್ಲೇ ಮಾರ್ಚ್ ಮೊದಲ ವಾರದಲ್ಲಿ ಅದ್ದೂರಿ ಟ್ರೇಲರ್ ಬಿಡುಗಡೆ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ. ಹಿಂದಿಯ ‘ಧುರಂಧರ್ 2’ ಸಿನಿಮಾ ಜೊತೆಗೆ ‘ಟಾಕ್ಸಿಕ್’ ಬಾಕ್ಸ್ ಆಫೀಸ್‌ನಲ್ಲಿ ಪೈಪೋಟಿ ನಡೆಸಲಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular