HomeLatest Newsನ.4ರಿಂದ ಎಂಬಿಎ, ಎಂಸಿಎ ಇತರೆ ಕೋರ್ಸ್ ಪ್ರವೇಶಕ್ಕೆ 3ನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆರಂಭ

ನ.4ರಿಂದ ಎಂಬಿಎ, ಎಂಸಿಎ ಇತರೆ ಕೋರ್ಸ್ ಪ್ರವೇಶಕ್ಕೆ 3ನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆರಂಭ

ಬೆಂಗಳೂರು: ಎಂಬಿಎ, ಎಂಸಿಎ, ME, M.Tech, M.Arch ಕೋರ್ಸ್ ಗಳ ಪ್ರವೇಶಕ್ಕೆ ಮೂರನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ನ.4ರಿಂದ ಆರಂಭವಾಗಲಿದೆ.

3ನೇ ಸುತ್ತಿನಲ್ಲಿ ಲಭ್ಯವಿರುವ ಸೀಟುಗಳ ವಿವರಗಳನ್ನು ನ.4ರಂದು KEA ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗುತ್ತದೆ.

₹25,000 ಕಾಷನ್ ಡೆಪಾಸಿಟ್ ಕಟ್ಟಿ  ನ.4ರಿಂದ 6ರವರೆಗೆ ಇಚ್ಛೆ/ಆಯ್ಕೆಗಳನ್ನು ದಾಖಲಿಸಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನ.7ರಂದು ಮಧ್ಯಾಹ್ನ 2ಗಂಟೆಗೆ ತಾತ್ಕಾಲಿಕ ಫಲಿತಾಂಶ ಪ್ರಕಟ. ನ.8ರಂದು ಮಧ್ಯಾಹ್ನ 2 ಗಂಟೆಗೆ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ.

ಸೀಟು ಹಂಚಿಕೆಯಾದವರು ನ.10ರಿಂದ 12ರವರೆಗೆ ಶುಲ್ಕ ಕಟ್ಟಿ ಸೀಟು ಖಾತರಿ ಚೀಟಿ ಡೌನ್‌ಲೋಡ್ ಮಾಡಿಕೊಂಡು ನ.13ರೊಳಗೆ ಕಾಲೇಜುಗಳಿಗೆ ವರದಿ ಮಾಡಿಕೊಳ್ಳಬೇಕು.

ಮೊದಲ ಮತ್ತು ಎರಡನೇ ಸುತ್ತಿನಲ್ಲಿ ಸಿಕ್ಕಿರುವ ಸೀಟು ರದ್ದುಪಡಿಸಿಕೊಳ್ಳಲು ನ.6ರವರೆಗೆ ಅವಕಾಶ ನೀಡಲಾಗಿದೆ. ಸೀಟು ರದ್ದುಪಡಿಸಿಕೊಂಡವರಿಗೆ 3ನೇ ಸುತ್ತಿನಲ್ಲಿ ಭಾಗವಹಿಸಲು ಅವಕಾಶ ಇರುವುದಿಲ್ಲ.

ವಿವರಗಳಿಗೆ ವೆಬ್ ಸೈಟ್ ನೋಡಿ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular