HomeKarnatakaಜಲಪಾತ ವೀಕ್ಷಿಸಲು ಬಂದಾಗಲೇ ಅವಘಡ; ಕಾಲು ಜಾರಿ ಬಿದ್ದು ಪ್ರವಾಸಿಗ ಸಾವು

ಜಲಪಾತ ವೀಕ್ಷಿಸಲು ಬಂದಾಗಲೇ ಅವಘಡ; ಕಾಲು ಜಾರಿ ಬಿದ್ದು ಪ್ರವಾಸಿಗ ಸಾವು

ರಜಾ ದಿನವಾದ ಭಾನುವಾರದಂದು ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಶಿವನಸಮುದ್ರದ ಗಗನಚುಕ್ಕಿ ಜಲಪಾತ ವೀಕ್ಷಿಸಲು ಬಂದಿದ್ದ ಯುವಕನೊಬ್ಬ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾನೆ.

ಬೆಂಗಳೂರಿನ ನೀಲಸಂದ್ರದಲ್ಲಿರುವ ಲ್ಯಾಂಡ್ ಮಿಲಿಟರಿ ತರಬೇತಿ ಕೇಂದ್ರದಲ್ಲಿ ಮಿಲಿಟರಿ ಪೊಲೀಸ್ ಸಿಬ್ಬಂದಿಯಾಗಿದ್ದ ಗುಜರಾತ್ ಮೂಲದ 26 ವರ್ಷದ ಚೌಧರಿ ಕೌಶಿಕ್ ಮೃತಪಟ್ಟವರಾಗಿದ್ದಾರೆ.

ಭಾನುವಾರದಂದು ಇವರು ತಮ್ಮ ಏಳು ಜನ ಸ್ನೇಹಿತರೊಂದಿಗೆ ಜಲಪಾತ ವೀಕ್ಷಣೆಗೆ ಬಂದಿದ್ದು, ಕೆಳಗ ಇಳಿಯುವ ವೇಳೆ ಕಾಲು ಜಾರಿ ಬಿದ್ದಿದ್ದಾರೆ ಎನ್ನಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಬೆಳಕವಾಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular