ವಂಚನಾ ಪ್ರಕರಣದ ಆರೋಪಿ ಬರೋಬ್ಬರಿ 28 ವರ್ಷಗಳ ಬಳಿಕ ‘ಅರೆಸ್ಟ್

ವಂಚನಾ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಬರೋಬ್ಬರಿ 28 ವರ್ಷಗಳ ಬಳಿಕ ಬಂಧಿಸಲಾಗಿದೆ.

ಬೆಳಗಾವಿ ಜಿಲ್ಲೆ ದೇವಲಾಪುರದ ಮಲ್ಲನಗೌಡ ಕರಬಸನಗೌಡ ಪಾಟೀಲ ಬಂಧಿತ ಆರೋಪಿಯಾಗಿದ್ದು, ಈತ ಕರ್ನಾಟಕ, ಮಹಾರಾಷ್ಟ್ರ ರಾಜ್ಯಗಳ ಹಲವು ಕಡೆ ವಂಚನೆ ನಡೆಸಿದ್ದನೆಂದು ಹೇಳಲಾಗಿದೆ.

ಈ ಹಿನ್ನೆಲೆಯಲ್ಲಿ ಈತನ ವಿರುದ್ಧ 1995ರಲ್ಲಿ ವಂಚನೆ ಪ್ರಕರಣ ದಾಖಲಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಈತನನ್ನು ಉತ್ತರ ಕನ್ನಡ ಜಿಲ್ಲೆ ಮುಂಡಗೋಡು ಸಿಪಿಐ ಬಿ.ಎಸ್. ಲೋಕಾಪುರ ನೇತೃತ್ವದ ತಂಡ ಹುಬ್ಬಳ್ಳಿಯಲ್ಲಿ ಬಂಧಿಸಿ ಶನಿವಾರದಂದು ನ್ಯಾಯಾಲಯಕ್ಕೆ ಹಾಜರುಪಡಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read