BREAKING : ಪ್ರೇಯಸಿ ತಾಯಿಗಾಗಿ ‘ಚೈನ್ ಸ್ನ್ಯಾಚರ್’ ಆದ ಡ್ಯಾನ್ಸ್ ಮಾಸ್ಟರ್ ; ಬೆಂಗಳೂರಿನಲ್ಲಿ ಖತರ್ನಾಕ್ ಆರೋಪಿ ಅರೆಸ್ಟ್.!

ಬೆಂಗಳೂರು : ಪ್ರೇಯಸಿ ತಾಯಿಯ ಚಿಕಿತ್ಸೆಗಾಗಿ ಸರಗಳ್ಳತನಕ್ಕೆ ಇಳಿದಿದ್ದ ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಜಿಗಣಿಯಲ್ಲಿ ಸೈಯದ್ ಅಲಿ ನದಾಫ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಡ್ಯಾನ್ಸ್ ಮಾಸ್ಟರ್ ಆಗಿ ಕೆಲಸ ಮಾಡುತ್ತಿದ್ದು, ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಪ್ರೇಯಸಿ ತಾಯಿಯ ಚಿಕಿತ್ಸೆಗೆ ಹಣ ಹೊಂದಿಸಲು ಈತ ಸರಗಳ್ಳತನಕ್ಕೆ ಇಳಿದಿದ್ದನು.

ತುಮಕೂರು. ದಾವಣಗೆರೆ ಸೇರಿದಂತೆ ಹಲವು ಕಡೆ ಈತ ಸರ ಕಳ್ಳತನ ಮಾಡಿದ್ದನು. ಸರ ಕಸಿದು ಪರಾರಿಯಾಗುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಬಂಧಿತನಿಂದ 8 ಲಕ್ಷ ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆದ ಪೊಲೀಸರು ಆರೋಪಿಯನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದ್ದಾರೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read