ಬೆಂಗಳೂರು : ಕಾಂಗ್ರೆಸ್ ಒತ್ತಾಯ ಜೋರಾದ ಬಳಿಕ ಈಗ ಕೇಂದ್ರ ಸರ್ಕಾರವು ಎಚ್ಚೆತ್ತು ಜನ ಗಣತಿಯ ಜೊತೆ ಜಾತಿ ಗಣತಿಯನ್ನು ಮಾಡುವುದಾಗಿ ಘೋಷಿಸಿರುವುದು ಸ್ವಾಗತಾರ್ಹ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.
ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿನ ಕೆಪಿಸಿಸಿ ಕಚೇರಿಯಲ್ಲಿ ಪ್ರಸ್ತುತ ರಾಜಕೀಯ ವಿದ್ಯಮಾನಗಳ ಕುರಿತು ಸುದ್ದಿಗೋಷ್ಠಿ ನಡೆಸಲಾಯಿತು. ನಂತರ ಮಾತನಾಡಿದ ಸಚಿವರು ಕಾಂಗ್ರೆಸ್ ಒತ್ತಾಯ ಜೋರಾದ ಬಳಿಕ ಈಗ ಕೇಂದ್ರ ಸರ್ಕಾರವು ಎಚ್ಚೆತ್ತು ಜನ ಗಣತಿಯ ಜೊತೆ ಜಾತಿ ಗಣತಿಯನ್ನು ಮಾಡುವುದಾಗಿ ಘೋಷಿಸಿರುವುದು ಸ್ವಾಗತಾರ್ಹ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (INC) ಮತ್ತು ನಮ್ಮ ರಾಷ್ಟ್ರದಾದ್ಯಂತ ಲಕ್ಷಾಂತರ ಸಮುದಾಯಗಳಿಗೆ ಇದೊಂದು ಗೆಲುವಿನ ಸಂಕೇತವಾಗಿದೆ. ಜಾತಿ ಗಣತಿ ನಡೆಸಲು ಬಿಜೆಪಿ ಸರ್ಕಾರದ ಈ ನಿರ್ಧಾರವು ನಮ್ಮ ನಾಯಕ ಶ್ರೀ ರಾಹುಲ್ ಗಾಂಧಿಯವರ ಅಚಲ ಬದ್ಧತೆಗೆ ಸಾಕ್ಷಿಯಾಗಿದೆ.
ನಮ್ಮ ನಾಯಕರಾದ ಶ್ರೀ ರಾಹುಲ್ ಗಾಂಧಿಯವರು, ಎಐಸಿಸಿ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರು, ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು, ಉಪಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಅವರು ಮತ್ತು ಎಲ್ಲಾ ಹಿರಿಯ ಕಾಂಗ್ರೆಸ್ ನಾಯಕರ ಅವಿರತ ಪ್ರತಿಪಾದನೆಯಿಂದಾಗಿ ಅಂತಿಮವಾಗಿ 11ವರ್ಷಗಳ ಬಳಿಕ ಈ ನಿರ್ಣಾಯಕ ವಿಷಯ ಮುನ್ನೆಲೆಗೆ ಬಂದಿದೆ.
ಈ ಗಣತಿಯು ದುರ್ಬಲ ವರ್ಗಗಳ ಸಬಲೀಕರಣ ಹಾಗೂ ವಿವಿಧ ಜಾತಿಗಳು ಎದುರಿಸುತ್ತಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಅಸಮಾನತೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಪಾರದರ್ಶಕವಾಗಿ ಪರಿಶೀಲಿಸಿ, ವ್ಯವಸ್ಥಿತವಾಗಿ ಅಸಮಾನತೆಗಳನ್ನು ಪರಿಹರಿಸಲು ಜಾತಿ ಜನಗಣತಿ ಮುಖ್ಯ.ಆಗ ಮಾತ್ರ ನಾವೆಲ್ಲರೂ ದುರ್ಬಲರನ್ನು ಮೇಲೆತ್ತುವ ಮತ್ತು ನಿಜವಾಗಿಯೂ ಸಮಾನತೆಯ ಸಮಾಜವನ್ನು ಸೃಷ್ಟಿಸುವ ಪರಿಣಾಮಕಾರಿ ನೀತಿಗಳನ್ನು ರೂಪಿಸಲು ಸಾಧ್ಯವಾಗುವುದು ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.
ಈ ವೇಳೆ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷರಾದ ಶ್ರೀ ರಮೇಶ್ ಬಾಬು, ಕೆಪಿಸಿಸಿ ಪದವೀಧರ ವಿಭಾಗದ ಅಧ್ಯಕ್ಷರಾದ ಶ್ರೀ ಎ.ಎನ್ ನಟರಾಜ ಗೌಡ, ಕೆಪಿಸಿಸಿ ಕಾರ್ಮಿಕರ ವಿಭಾಗದ ಅಧ್ಯಕ್ಷರಾದ ಶ್ರೀ ಪುಟ್ಟಸ್ವಾಮಿ ಗೌಡ, INTUC ಅಧ್ಯಕ್ಷರಾದ ಶ್ರೀ ಲಕ್ಷ್ಮೀ ವೆಂಕಟೇಶ್, ಕೆಪಿಸಿಸಿ ಪರಿಶಿಷ್ಟ ಜಾತಿ (ಎಸ್.ಸಿ) ಘಟಕದ ಅಧ್ಯಕ್ಷರಾದ ಶ್ರೀ ಧರ್ಮಸೇನ, ಕೆಪಿಸಿಸಿ ಪರಿಶಿಷ್ಟ ವಿಭಾಗದ ಅಧ್ಯಕ್ಷರಾದ ಎಂ.ವಿಜಯನಾಯಕ್, ಕೆಪಿಸಿಸಿ ಮಾಜಿ ಸೈನಿಕರ ವಿಭಾಗದ ಅಧ್ಯಕ್ಷರಾದ ಶ್ರೀ ಮಂಜುನಾಥ್ ಸೇರಿದಂತೆ ಅನೇಕ ಮುಖಂಡರು ಹಾಜರಿದ್ದರು.