ಬೆಂಗಳೂರು: ಶ್ರೀ ರಾಮನವಮಿ ಹಿನ್ನೆಲೆಯಲ್ಲಿ ಏಪ್ರಿಲ್ 6ರಂದು ಭಾನುವಾರ ಬೆಂಗಳೂರಿನಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟ ನಿಷೇಧಿಸಿ ಬಿಬಿಎಂಪಿ ಆದೇಶಿಸಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ ಕಸಾಯಿಖಾನೆಗಳಲ್ಲಿ ಪ್ರಾಣಿವಧೆ ಮತ್ತು ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ನಿಯಮ ಉಲ್ಲಂಘಿಸಿದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ಎಚ್ಚರಿಕೆ ನೀಡಿದ್ದಾರೆ.