HomeLatest Newsಚುನಾವಣೆ ವೇಳೆಯೇ 'ಬಾಂಬ್ ಬ್ಲಾಸ್ಟ್' ಬಗ್ಗೆ ಕೇಂದ್ರ ಸರ್ಕಾರವೇ ಹೇಳಬೇಕು : ಸಿಎಂ ಸಿದ್ದರಾಮಯ್ಯ

ಚುನಾವಣೆ ವೇಳೆಯೇ ‘ಬಾಂಬ್ ಬ್ಲಾಸ್ಟ್’ ಬಗ್ಗೆ ಕೇಂದ್ರ ಸರ್ಕಾರವೇ ಹೇಳಬೇಕು : ಸಿಎಂ ಸಿದ್ದರಾಮಯ್ಯ

ಬೆಂಗಳೂರು :  ಚುನಾವಣೆ ವೇಳೆಯೇ ನಡೆದ   ಬಾಂಬ್ ಬ್ಲಾಸ್ಟ್ ಬಗ್ಗೆ ಕೇಂದ್ರ ಸರ್ಕಾರವೇ ಹೇಳಬೇಕು ಎಂದು  ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ   ‘ಬಾಂಬ್ ಬ್ಲಾಸ್ಟ್ ಗಳು ಆಗಬಾರದು. ಅಮಾಯಕರ ಜೀವಹಾನಿ ಬೇಸರದ ಸಂಗತಿ. ಚುನಾವಣೆ ವೇಳೆಯೇ ಬಾಂಬ್ ಬ್ಲಾಸ್ಟ್ ಬಗ್ಗೆ ಕೇಂದ್ರ ಸರ್ಕಾರವೇ ಹೇಳಬೇಕು. ಕೇಂದ್ರವೇ ತನಿಖೆ ನಡೆಸಿ ಉತ್ತರಿಸಲಿ‌. ನೆನ್ನೆಯ ದೆಹಲಿ ಬ್ಲಾಸ್ಟ್ ಇವತ್ತಿನ ಬಿಹಾರ ಚುನಾವಣೆಯ ಮೇಲೆ ಪ್ರಭಾವ ಬೀರಬಹುದು’ ಎಂದಿದ್ದಾರೆ.

‘ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಕಾರ್ ಸ್ಪೋಟದಿಂದ ಹಲವರು ಸಾವಿಗೀಡಾದ ಸುದ್ದಿ ನೋವಿನ‌ ಜೊತೆಗೆ ದಿಗ್ಭ್ರಮೆ ಉಂಟುಮಾಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ದೆಹಲಿಯ ಸ್ಪೋಟ ಪ್ರಕರಣವನ್ನು ರಾಜ್ಯ ಸರ್ಕಾರವು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ. ಜನನಿಬಿಡ ಸ್ಥಳಗಳಲ್ಲಿ ಭದ್ರತೆಯನ್ನು ಹೆಚ್ಚಿಸಿ, ಜನರ ಸುರಕ್ಷತೆಗೆ ಆದ್ಯತೆ ನೀಡುವಂತೆ ಗೃಹ ಇಲಾಖೆಗೆ ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಯಾವುದೇ ತರನಾದ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಸಾರ್ವಜನಿಕರು ಕೂಡ ಪೊಲೀಸ್ ಇಲಾಖೆಯ ಜೊತೆ ಸಹಕರಿಸಬೇಕು ಎಂದು ಮನವಿ ಮಾಡುತ್ತೇನೆ’ ಎಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular