HomeLatest Newsಕಾಕ್ರೋಚ್ ಜನತಾ ಪಾರ್ಟಿಯ ಬೇಡಿಕೆ ದುರ್ಬಲವಾಗಿತ್ತು ; ದೆಹಲಿ ಪ್ರತಿಭಟನೆಗೆ ನಟ ಚೇತನ್ ಅಹಿಂಸಾ ಪ್ರತಿಕ್ರಿಯೆ

ಕಾಕ್ರೋಚ್ ಜನತಾ ಪಾರ್ಟಿಯ ಬೇಡಿಕೆ ದುರ್ಬಲವಾಗಿತ್ತು ; ದೆಹಲಿ ಪ್ರತಿಭಟನೆಗೆ ನಟ ಚೇತನ್ ಅಹಿಂಸಾ ಪ್ರತಿಕ್ರಿಯೆ

ನವದೆಹಲಿ: ದೆಹಲಿಯಲ್ಲಿ ನಡೆಯುತ್ತಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ನೇತೃತ್ವದ ವಿದ್ಯಾರ್ಥಿ ಹಾಗೂ ಯುವಕರ ಪ್ರತಿಭಟನೆಗೆ ಸಂಬಂಧಿಸಿದಂತೆ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಪ್ರತಿಕ್ರಿಯೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಅವರು, “ಕಾಕ್ರೋಚ್ ಜನತಾ ಪಾರ್ಟಿಯ ಬೇಡಿಕೆ ದುರ್ಬಲವಾಗಿತ್ತು” ಎಂದು ಹೇಳಿದ್ದಾರೆ. ‘’CJP ಅವರ ಬೇಡಿಕೆ ದುರ್ಬಲವಾಗಿತ್ತು. ಎಲೈಟ್ NEET ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರು ನೇರವಾಗಿ ಭಾಗಿಯಾಗಿದ್ದಾರೆ ಎಂಬ ವಿಶ್ವಾಸಾರ್ಹ ಸಾಕ್ಷ್ಯ ಇಲ್ಲ. ಆದರೆ MUDA, ಎಸ್‌ಟಿ ಕಾರ್ಪೊರೇಷನ್ ಮುಂತಾದ ದೊಡ್ಡ ಭ್ರಷ್ಟಾಚಾರ ಪ್ರಕರಣಗಳಲ್ಲಿ, ಹಲವಾರು ಬಾರಿ ಸಂಬಂಧಿತ ಸಚಿವರು ಕೇವಲ ನೋಡುತ್ತಿರಲಿಲ್ಲ; ಅವರಿಗೆ ಸಹ ಪಾಲು ಇತ್ತು ಎಂಬ ಆರೋಪಗಳು ಬರುತ್ತವೆ.  ಪ್ರತಿ ವಿಷಯವನ್ನೂ ಅದರ ಸಂದರ್ಭವನ್ನು (ಕಾಂಟೆಕ್ಸ್ಟ್) ಗಮನದಲ್ಲಿಟ್ಟುಕೊಂಡು ನೋಡಬೇಕು ಎಂದು ಚೇತನ್ ಅಹಿಂಸಾ ಪ್ರತಿಕ್ರಿಯೆ ನೀಡಿದ್ದಾರೆ.

ಪ್ರಸ್ತುತ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಶಿಕ್ಷಣ ವ್ಯವಸ್ಥೆಯಲ್ಲಿನ ಅಕ್ರಮಗಳು, ಪರೀಕ್ಷಾ ಸುಧಾರಣೆ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಮುಂದುವರಿದಿದೆ. ಪ್ರತಿಭಟನೆಗೆ ಹಲವು ವಿದ್ಯಾರ್ಥಿ ಸಂಘಟನೆಗಳು, ಸಾಮಾಜಿಕ ಕಾರ್ಯಕರ್ತರು ಹಾಗೂ ಕೆಲವು ಸಿನಿತಾರೆಯರೂ ಬೆಂಬಲ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular