HomeAutoಆಯುಧ ಪೂಜೆಗೆ ಬಸ್ಸುಗಳ ಪೂಜಾ ಖರ್ಚಿಗೂ ಕಾಂಗ್ರೆಸ್ ಸರ್ಕಾರದ ಬಳಿ ದುಡ್ಡಿಲ್ಲ; ಬಿಜೆಪಿ ವ್ಯಂಗ್ಯ

ಆಯುಧ ಪೂಜೆಗೆ ಬಸ್ಸುಗಳ ಪೂಜಾ ಖರ್ಚಿಗೂ ಕಾಂಗ್ರೆಸ್ ಸರ್ಕಾರದ ಬಳಿ ದುಡ್ಡಿಲ್ಲ; ಬಿಜೆಪಿ ವ್ಯಂಗ್ಯ

ವಿಜಯ ದಶಮಿ – ಆಯುಧ ಪೂಜೆ ಸಮೀಪಿಸುತ್ತಿದ್ದು, ಇದರ ಮಧ್ಯೆ ರಾಜ್ಯ ಸರ್ಕಾರ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ಸುಗಳ ಪೂಜೆಗೆ ಪ್ರತಿ ಬಸ್ಸಿಗೆ 100 ರೂ. ನಿಗದಿಪಡಿಸಿದೆ ಎನ್ನಲಾಗಿದೆ. ಇದಕ್ಕೆ ರಾಜ್ಯ ಬಿಜೆಪಿ ವ್ಯಂಗ್ಯವಾಡಿದೆ.

ಆಯುಧ ಪೂಜೆಗೆ ಬಸ್ಸುಗಳ ಪೂಜಾ ಖರ್ಚಿಗೂ ಕಾಂಗ್ರೆಸ್ ಸರ್ಕಾರದ ಬಳಿ ದುಡ್ಡಿಲ್ಲ.

ಪ್ರತಿ ಬಸ್ಸಿಗೆ ಕೇವಲ ₹100 ನೀಡುವಷ್ಟರ ಮಟ್ಟಿಗೆ ಸಾರಿಗೆ ಇಲಾಖೆ ದಿವಾಳಿಯಾಗಿದೆ!!

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಚಿವ ರಾಮಲಿಂಗಾರೆಡ್ಡಿ ಅವರೆ, ಸಾರಿಗೆ ಸಂಸ್ಥೆ ಹಿಂದೆಂದೂ ಕಂಡು ಕೇಳರಿಯದಂತಹ ಲಾಭದಲ್ಲಿದೆ ಎಂದು ಪುಟಗಟ್ಟಲೆ ಜಾಹೀರಾತು ನೀಡುವ ನಿಮಗೆ ಬಸ್ಸುಗಳ ಪೂಜಾ ಖರ್ಚಿಗೆ ಹಣ ನೀಡುವ ಯೋಗ್ಯತೆ ಇಲ್ಲವೇ..?? ಎಂದು ಸಾಮಾಜಿಕ ಜಾಲತಾಣಗಳ ಮೂಲಕ ವ್ಯಂಗ್ಯವಾಡಿದೆ.

For Latest News Updates, Join Our Whatsapp Community🚩
RELATED ARTICLES

Most Popular