HomeLatest NewsBREAKING : ವೃಕ್ಷಮಾತೆ 'ಸಾಲುಮರದ ತಿಮ್ಮಕ್ಕ' ನಿಧನದಿಂದ ನಾಡು ಬಡವಾಗಿದೆ : ಸಿಎಂ ಸಿದ್ದರಾಮಯ್ಯ ಸಂತಾಪ.!

BREAKING : ವೃಕ್ಷಮಾತೆ ‘ಸಾಲುಮರದ ತಿಮ್ಮಕ್ಕ’ ನಿಧನದಿಂದ ನಾಡು ಬಡವಾಗಿದೆ : ಸಿಎಂ ಸಿದ್ದರಾಮಯ್ಯ ಸಂತಾಪ.!

ಬೆಂಗಳೂರು : ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಿಧನದಿಂದ ನಾಡು ಬಡವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.

ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ ಸಿಎಂ ಸಿದ್ದರಾಮಯ್ಯ ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರ ನಿಧನದ ಸುದ್ದಿ ತಿಳಿದು ದುಃಖಿತನಾಗಿದ್ದೇನೆ. ಸಾವಿರಾರು ಗಿಡಗಳನ್ನು ನೆಟ್ಟು, ಅವುಗಳನ್ನು ಮಕ್ಕಳಂತೆ ಸಲಹಿದ ತಿಮ್ಮಕ್ಕನವರು ತಮ್ಮ ಬಹುಪಾಲು ಜೀವಿತ ಕಾಲವನ್ನು ಪರಿಸರ ಸಂರಕ್ಷಣೆಗಾಗಿ ಮುಡಿಪಾಗಿಟ್ಟವರು. ಇಂದು ತಿಮ್ಮಕ್ಕನವರು ನಮ್ಮನ್ನು ಅಗಲಿದರೂ ಅವರ ಪರಿಸರ ಪ್ರೇಮ ಅವರನ್ನು ಚಿರಸ್ಥಾಯಿಯಾಗಿಸಿದೆ. ಅಗಲಿದ ಮಹಾಚೇತನಕ್ಕೆ ನನ್ನ ನಮನಗಳು. ಸಾಲುಮರದ ತಿಮ್ಮಕ್ಕನವರ ನಿಧನದಿಂದ ನಾಡು ಬಡವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬವರ್ಗಕ್ಕೆ ನನ್ನ ಸಂತಾಪಗಳು ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular