ರೈತರಿಗೆ ಸಹಕಾರ-ಸೌಲಭ್ಯ ನೀಡಿದಲ್ಲಿ ದೇಶದ ಅಭಿವೃದ್ದಿ ಸಾಧ್ಯ : ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ : ನಮ್ಮ ದೇಶದ ಆರ್ಥಿಕತೆಯ ಬೆನ್ನೆಲುಬಾಗಿರುವ ರೈತರಿಗೆ ಉತ್ತಮ ಸಹಕಾರ ಮತ್ತು ಸೌಲಭ್ಯಗಳನ್ನು ನೀಡಿದಲ್ಲಿ ದೇಶದ ಅಭಿವೃದ್ದಿ ಸಹ ಉತ್ತಮವಾಗಿ ಆಗಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಎಪಿಎಂಸಿ ರೈತರಿಗೆ ಸಹಕಾರಿಯಾಗಿದ್ದು ಉತ್ತಮ ವಹಿವಾಟು ಮೂಲಕ ಜಿಲ್ಲೆಗೆ ಕಿರೀಟಪ್ರಾಯವಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ ತಿಳಿಸಿದರು.

ಕೃಷಿ ಮಾರಾಟ ಇಲಾಖೆ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವತಿಯಿಂದ 2019-20 ನೇ ಸಾಲಿನ ವಾರ್ಷಿಕ ಕ್ರಿಯಾ ಯೋಜನೆಯಡಿ ಶಿವಮೊಗ್ಗ ನಗರದ ಎಪಿಎಂಸಿ ಪ್ರಾಂಗಣದಲ್ಲಿ ನೂತನವಾಗಿ ನಿರ್ಮಿಸಿರುವ ವಾಣಿಜ್ಯ ಸಂಕೀರ್ಣವನ್ನು ಬುಧವಾರದಂದು ಉದ್ಘಾಟಿಸಿ ಅವರು ಮಾತನಾಡಿದರು.ಶಿವಮೊಗ್ಗದ ಎಪಿಎಂಸಿ ರಾಜ್ಯದಲ್ಲೇ ಎರಡನೇ ಅತಿ ಹೆಚ್ಚು ವಹಿವಾಟು ನಡೆಸುವ ಕೇಂದ್ರವಾಗಿರುವುದು ಹೆಮ್ಮೆಯ ವಿಷಯ. ರೈತರನ್ನು ಯಾರೂ ಕಡೆಗಣಿಸಬಾರದು. ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಂಗಾರಪ್ಪನವರು 35 ವರ್ಷಗಳ ಹಿಂದೆ ರೈತರ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ಯೋಜನೆ ನೀಡಿದಾಗ ಸಾಕಷ್ಟು ಟೀಕೆಗಳು ಬಂದವು. ಆದರೆ ಇದೇ ಯೋಜನೆಯ ಫಲವಾಗಿ ಇಂದು ರೈತರು ಅಭಿವೃದ್ದಿಯಾಗಿದ್ದು ಆರ್ಥಿಕತೆಗೆ ಉತ್ತಮ ಕೊಡುಗೆ ನೀಡುತ್ತಿದ್ದಾರೆ.

ಶಿವಮೊಗ್ಗ ಜಿಲ್ಲೆ ಅತಿ ಹೆಚ್ಚು ಅಡಿಕೆ ಬೆಳೆಯುವ ಪ್ರದೇಶವಾಗಿದೆ. ಅಡಿಕೆ, ಶುಂಠಿ, ಅರಿಶಿನ, ಅನಾನಸ್ ಇತರೆ ಬೆಳೆಗೆ ಬೇಸಿಗೆಯಲ್ಲೂ ನೀರಿನ ಅವಶ್ಯಕತೆ ಇದ್ದು, ಉಚಿತ ಕರೆಂಟ್‌ನಿAದ ರೈತರಿಗೆ ಬಹಳ ಅನುಕೂಲವಾಗಿದೆ. ರಾಜ್ಯ ಸರ್ಕಾರವು ಈ ಯೋಜನೆಗೆ 21 ಸಾವಿರ ಕೋಟಿ ಹಣವನ್ನು ರೈತರ ಪರವಾಗಿ ಪಾವತಿಸುತ್ತಿದೆ. ರೈತರಿಗೆ ಇದೊಂದು ಕೊಡುಗೆಯಾಗಿದ್ದು ಈ ಸೌಲಭ್ಯ ಪಡೆದ ರೈತರು ಆರ್ಥಿಕತೆಗೆ ಉತ್ತಮ ಕೊಡುಗೆ ನೀಡುತ್ತಿದ್ದಾರೆ ಎಂದರು.
ರೈತರ ಚಟುವಟಿಕೆಗಳಿಂದಾಗಿ ಎಪಿಎಂಸಿ, ಮ್ಯಾಮ್‌ಕೋಸ್, ಹಾಪ್‌ಕಾಮ್ಸ್, ಇತರೆ ಕೃಷಿ ಮತ್ತು ತೋಟಗಾರಿಕೆ ಮಾರುಕಟ್ಟೆಗಳಲ್ಲಿ ಉತ್ತಮ ವಹಿವಾಟು, ಆದಾಯ ಸಾಧ್ಯವಾಗುತ್ತಿದೆ. ಶಿವಮೊಗ್ಗ ಎಪಿಎಂಸಿ ಯಲ್ಲಿ ರೂ.2475 ಕೋಟಿ ವ್ಯವಹಾರ ನಡೆಯುತ್ತಿದ್ದು, ರೂ.250 ಕೋಟಿ ಜಿಎಸ್‌ಟಿ ಪಾವತಿ ಮಾಡುತ್ತಿದೆ. ರೈತರ ಉತ್ಪನ್ನಗಳ ಮಾರಾಟಕ್ಕೆ ಎಪಿಎಂಸಿ ಮಳಿಗೆಗಳ ಅವಶ್ಯಕತೆ ಇದ್ದು, ಹೀಗೆಯೇ ಅಭಿವೃದ್ದಿ ಹೊಂದಲಿ ಎಂದು ಆಶಿಸಿದರು.
ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಪ್ರಾಸ್ತಾವಿಕವಾಗಿ ಮಾತನಾಡಿ, ಶಿವಮೊಗ್ಗದ ಎಪಿಎಂಸಿ ರಾಜ್ಯದಲ್ಲೇ ಎರಡನೇ ಅತಿ ಹೆಚ್ಚು ವಹಿವಾಟು ನಡೆಸುವ ಮಾರುಕಟ್ಟೆಯಾಗಿದೆ. 1950 ರಲ್ಲಿ ಸ್ಥಾಪನೆಯಾದ ಎಪಿಎಂಸಿ 102 ಎಕರೆ ಪ್ರದೇಶದಲ್ಲಿ ವಿವಿಧ ಕಟ್ಟಡಗಳನ್ನು ಹೊಂದಿದೆ.


ಪ್ರಸ್ತುತ ಎಪಿಎಂಸಿ ಪ್ರಾಂಗಣದಲ್ಲಿ ರೂ.10 ಕೋಟಿ ವೆಚ್ಚದಲ್ಲಿ ನೂತನವಾಗಿ 28 ಮಳಿಗೆಗಗಳನ್ನು ನಿರ್ಮಿಸಲಾಗಿದ್ದು ಈಗಾಗಲೇ ಹರಾಜು ಮೂಲಕ 23 ಮಳಿಗೆಗಳನ್ನು ವಿತರಣೆ ಮಾಡಲಾಗಿದೆ.
ಎಪಿಎಂಸಿ ರೈತರ ಉತ್ಪನ್ನಗಳಿಗೆ ಉತ್ತಮ ಬೆಲೆ ಮತ್ತು ಸೌಲಭ್ಯ ನೀಡುವ ಮೂಲಕ ರೈತರ ಬೆನ್ನೆಲುಬಾಗಿದೆ. ರೈತರಿಗೆ ಆನ್‌ಲೈನ್ ವಹಿವಾಟು ಮತ್ತು ಎಪಿಎಂಸಿ ಹೊರಗಡೆಯೂ ವ್ಯಾಪಾರ ಮಾಡಲು ಅವಕಾಶ ಮಾಡಿಕೊಟ್ಟಿದೆ ಎಂದ ಅವರು ಇದೇ ನೂತನ ಕಟ್ಟಡದಲ್ಲಿ ಸಬ್ ರಿಜಿಸ್ಟಾçರ್ ಕಚೇರಿ ಕೂಡ ಬರಲಿದ್ದು ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದರು.

ಕರ್ನಾಟಕ ರಾಜ್ಯ ಭೋವಿ ನಿಗಮದ ಅಧ್ಯಕ್ಷ ರವಿಕುಮಾರ್ ಎಸ್, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಲೆಮಾರಿಗಳ ಅಭಿವೃದ್ದಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ. ಹಾಪ್‌ಕಾಮ್ಸ್ ಅಧ್ಯಕ್ಷ ವಿಜಯಕುಮಾರ್, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಚಂದ್ರಭೂಪಾಲ್, ತಾಲ್ಲೂಕು ಅಧ್ಯಕ್ಷ ಹೆಚ್ ಎಂ ಮಧು, ಕೃಷಿ ವಿವಿ ನಿರ್ದೇಶಕ ಹೆಚ್ ಡಿ ದೇವಿಕುಮಾರ್, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಎಪಿಎಂಸಿ ಕಾರ್ಯದರ್ಶಿ ಸತೀಶ್ ಹೆಚ್ ವೈ, ಇತರೆ ಅಧಿಕಾರಿಗಳು ಪಾಲ್ಗೊಂಡಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read