HomeKarnatakaBIG NEWS : ಫೆ.28 ರವರೆಗೂ 'ಕನ್ನಡ ಬೋರ್ಡ್' ಹಾಕಲು ಡೆಡ್ ಲೈನ್, ತಪ್ಪಿದ್ರೆ.....! :...

BIG NEWS : ಫೆ.28 ರವರೆಗೂ ‘ಕನ್ನಡ ಬೋರ್ಡ್’ ಹಾಕಲು ಡೆಡ್ ಲೈನ್, ತಪ್ಪಿದ್ರೆ…..! : ಕರವೇ ನಾರಾಯಣಗೌಡ ಎಚ್ಚರಿಕೆ

ಬೆಂಗಳೂರು : ಫೆ.28 ರವರೆಗೂ ಕನ್ನಡ ಬೋರ್ಡ್ ಹಾಕಲು ಡೆಡ್ ಲೈನ್ ನೀಡಲಾಗಿದೆ, ತಪ್ಪಿದ್ರೆ ಇಡೀ ರಾಜ್ಯವೇ ಹೊತ್ತಿ ಉರಿಯುತ್ತದೆ ಎಂದು ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಫೆ.28 ರವರೆಗೂ ಕನ್ನಡ ಬೋರ್ಡ್ ಹಾಕಲು ಡೆಡ್ ಲೈನ್ ನೀಡಲಾಗಿದೆ, ಈ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಫೆ.28 ರೊಳಗೆ ಎಲ್ಲಾ ಅಂಗಡಿಗಳಲ್ಲಿ ಕನ್ನಡ ಬೋರ್ಡ್ ಹಾಕಿಸಬೇಕು. ಇಲ್ಲವಾದಲ್ಲಿ ಮತ್ತೊಂದು ಹೋರಾಟದಲ್ಲಿ ನೀವು ನಮ್ಮನ್ನು ನೋಡಬೇಕಾಗುತ್ತದೆ ಎಂದು ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಅನ್ಯ ಭಾಷೆಯ ನಾಮಫಲಕಗಳನ್ನು ಧ್ವಂಸಗೊಳಿಸಿ ಪ್ರತಿಭಟನೆ ಮಾಡಿದ ಪ್ರಕರಣದಲ್ಲಿ ಕರವೇ ಅಧ್ಯಕ್ಷ ನಾರಾಯಣಗೌಡ ಸೇರಿ ಅನೇಕರನ್ನು ಬಂಧಿಸಲಾಗಿತ್ತು. ಇದನ್ನು ಖಂಡಿಸಿ ಕನ್ನಡಪರ ಹೋರಾಟಗಾರರು ಪ್ರತಿಭಟನೆ ನಡೆಸಿದ್ದರು. ಕೆಲವು ದಿನಗಳ ನಂತರ ಅವರನ್ನು ಜಾಮೀನಿನ ಮೂಲಕ ಬಿಡುಗಡೆ ಮಾಡಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಫೆ.28 ರೊಳಗೆ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಬಳಕೆ ಕಡ್ಡಾಯ

ಫೆಬ್ರವರಿ 28 ರೊಳಗೆ ನಾಮಫಲಕಗಳಲ್ಲಿ ಶೇ.60 % ಕನ್ನಡ ಬಳಕೆ ಕಡ್ಡಾಯವಾಗಿದ್ದು, ಇಲ್ಲದಿದ್ರೆ ದಂಡ ಹಾಕಲಾಗುತ್ತದೆ ಎಂದು ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ.ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯ್ದೆ ಅನ್ವಯ ಬೆಂಗಳೂರಿನ ಎಲ್ಲಾ ಅಂಗಡಿ, ಮುಂಗಟ್ಟುಗಳು, ಕಂಪನಿಗಳು, ಸಂಸ್ಥೆಗಳು, ವಾಣಿಜ್ಯ ಮಳಿಗೆಗಳು, ಕಾರ್ಖಾನೆಗಳು, ಸಂಘ-ಸಂಸ್ಥೆ, ಶಿಕ್ಷಣ ಸಂಸ್ಥೆಗಳು ಸೇರಿದಂತೆ ಎಲ್ಲಾ ರೀತಿಯ ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಭಾಷೆ ಬಳಕೆ ಕಡ್ಡಾಯವಾಗಿದೆ. ಆದೇಶ ಪಾಲನೆಗೆ ಫೆಬ್ರವರಿ 28 ಕೊನೆಯ ದಿನವಾಗಿದೆ. ಪಾಲಿಸದಿದ್ದಲ್ಲಿ ಪರವಾನಗಿ ರದ್ದು ಮಾಡುವುದು ಅನಿವಾರ್ಯವಾಗಲಿದೆ’’ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ನಾಮಫಲಕಗಳಲ್ಲಿ ಕನ್ನಡ ಬಳಕೆ ಕಡ್ಡಾಯ ಮಾಡುವ ವಿಚಾರಕ್ಕೆ ಕನ್ನಡಪರ ಸಂಘಟನೆಗಳು ಬೆಂಗಳೂರಿನಲ್ಲಿ ಭಾರಿ ಪ್ರತಿಭಟನೆ ನಡೆಸಿದ್ದವು. ನಂತರ ಸರ್ಕಾರ ನಾಮಫಲಕಗಳಲ್ಲಿ ಶೇ.60 % ಕನ್ನಡ ಬಳಕೆ ಕಡ್ಡಾಯಗೊಳಿಸಿದ್ದು, ಫೆ.28 ಡೆಡ್ ಲೈನ್ ನೀಡಿದೆ.

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular