ಬೆಂಗಳೂರು: ಬೆಂಗಳೂರಿನಲ್ಲಿ ನಿಯೋಜಿತ ಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾದ ವಿವಿಧ ಮಠಾಧೀಶರ ನಿಯೋಗ ಶುಭ ಹಾರೈಸಿದೆ.
ಬೆಂಗಳೂರಿನ ಡಿ.ಕೆ. ಶಿವಕುಮಾರ್ ನಿವಾಸದಲ್ಲಿ ಭೇಟಿಯಾದ ಮಠಾಧೀಶರು ಅವರೊಂದಿಗೆ ಚರ್ಚೆ ನಡೆಸಿ ಮುಖ್ಯಮಂತ್ರಿ ಹುದ್ದೆಗೆ ಆಯ್ಕೆಯಾಗಿದ್ದಕ್ಕೆ ಅಭಿನಂದಿಸಿದ್ದಾರೆ. ಈ ಸಂದರ್ಭದಲ್ಲಿ ವಾಲ್ಮೀಕಿ ಶ್ರೀಗಳು, ಪುರುಷೋತ್ತಮಾನಂದ ಶ್ರೀಗಳು, ಭೋವಿ ಗುರುಪೀಠದ ಶ್ರೀಗಳು ಸೇರಿದಂತೆ ವಿವಿಧ ಮಠಾಧೀಶರು ಇದ್ದರು.
ಜೂನ್ 3ರಂದು ಸಂಜೆ 4:05ಕ್ಕೆ ಲೋಕಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಅವರು ರಾಜ್ಯಪಾಲರ ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ. ರಾಜ್ಯಪಾಲರು ಸರ್ಕಾರ ರಚನೆಗೆ ಆಹ್ವಾನಿಸಿದ್ದು, ಜೂನ್ 3ರಂದು ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

