SHOCKING : ಚಿಕಿತ್ಸೆ ಕೊಡೋದು ಬಿಟ್ಟು ಮೊಬೈಲ್ ನಲ್ಲಿ ‘ರೀಲ್ಸ್’ ನೋಡಿದ ವೈದ್ಯ : ಹೃದಯಘಾತದಿಂದ ಮಹಿಳೆ ಸಾವು|WATCH VIDEO

ಹೃದಯಘಾತವಾದ ಮಹಿಳೆಗೆ ಚಿಕಿತ್ಸೆ ಕೊಡುವುದು ಬಿಟ್ಟು ವೈದ್ಯನೋರ್ವ ಮೊಬೈಲ್ ನಲ್ಲಿ ರೀಲ್ಸ್ ನೋಡಿದ್ದು, ವಿಡಿಯೋ ನೆಟ್ಟಿಗರ ಕಣ್ಣು ಕೆಂಪಗಾಗಿಸಿದೆ.

60 ವರ್ಷದ ಮಹಿಳೆಯೊಬ್ಬರು ಹೃದಯಾಘಾತದಿಂದ ಮೈನ್ಪುರಿ ಜಿಲ್ಲಾ ಆಸ್ಪತ್ರೆಯ ತುರ್ತು ವಾರ್ಡ್ನಲ್ಲಿ ಸುಮಾರು 15 ನಿಮಿಷಗಳ ಕಾಲ ಚಿಕಿತ್ಸೆ ಪಡೆಯದೆ ಮಲಗಿದ್ದರು. ಕರ್ತವ್ಯದಲ್ಲಿದ್ದ ವೈದ್ಯ ಡಾ.ಆದರ್ಶ್ ಸೆಂಗಾರ್ ಅವರು ರೋಗಿಗೆ ಚಿಕಿತ್ಸೆ ನೀಡುವ ಬದಲು ತಮ್ಮ ಮೊಬೈಲ್ ಫೋನ್ನಲ್ಲಿ ವೀಡಿಯೊಗಳನ್ನು ನೋಡುವ ಸಮಯ ವ್ಯರ್ಥ ಮಾಡಿದ್ದಾರೆ ಎಂದು ಅವರ ಕುಟುಂಬ ಆರೋಪಿಸಿದೆ.

ಮಹಿಳೆಯನ್ನು ಪರ್ವೇಶ್ ಕುಮಾರಿ ಎಂದು ಗುರುತಿಸಲಾಗಿದ್ದು, ಮಂಗಳವಾರ ಮಧ್ಯಾಹ್ನ ಆಸ್ಪತ್ರೆಗೆ ಕರೆತರಲಾಯಿತು. ಆಕೆಯನ್ನು ವೈಯಕ್ತಿಕವಾಗಿ ಪರೀಕ್ಷಿಸುವ ಬದಲು, ಡಾ.ಸೆಂಗಾರ್ ಪರಿಸ್ಥಿತಿಯನ್ನು ನಿಭಾಯಿಸಲು ನರ್ಸ್ಗೆ ಸೂಚನೆ ನೀಡಿದ್ದಾರೆ ಎಂದು ಆಕೆಯ ಕುಟುಂಬ ಹೇಳಿಕೊಂಡಿದೆ.
ಈ ಘಟನೆಯ ವೀಡಿಯೊ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಸಿಸಿಟಿವಿ ದೃಶ್ಯಾವಳಿಗಳು ವೈದ್ಯರು ತಮ್ಮ ಮೇಜಿನ ಬಳಿ ಕುಳಿತು, ದಾದಿಯರು ರೋಗಿಗೆ ಚಿಕಿತ್ಸೆ ನೀಡುತ್ತಿರುವಾಗ ಡಾಕ್ಟರ್ ಫೋನ್ ಬಳಸಿದ್ದಾರೆ. ಸಕಾಲಕ್ಕೆ ಚಿಕಿತ್ಸೆ ಸಿಗದೇ ಮಹಿಳೆ ಮೃತಪಟ್ಟಿದ್ದು, ವೈದ್ಯರ ವಿರುದ್ಧ ಮಹಿಳೆ ಕುಟುಂಬಸ್ಥರು ಆಕ್ರೋಶ ಹೊರ ಹಾಕಿದ್ದಾರೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read