HomeLatest Newsಸಾಹಿತಿ ದೊಡ್ಡರಂಗೇಗೌಡರ ಚಿಕಿತ್ಸೆಯ ಸಂಪೂರ್ಣ ವೆಚ್ಚ ಸರ್ಕಾರದಿಂದಲೇ ಪಾವತಿ

ಸಾಹಿತಿ ದೊಡ್ಡರಂಗೇಗೌಡರ ಚಿಕಿತ್ಸೆಯ ಸಂಪೂರ್ಣ ವೆಚ್ಚ ಸರ್ಕಾರದಿಂದಲೇ ಪಾವತಿ

ಬೆಂಗಳೂರು: ತೀವ್ರ ಅನಾರೋಗ್ಯಕ್ಕೆ ಒಳಗಾಗಿ ಕೆಂಗೇರಿಯ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿರುವ ಸಾಹಿತಿ ದೊಡ್ಡರಂಗೇಗೌಡ ಅವರ ಸಂಪೂರ್ಣ ವೈದ್ಯಕೀಯ ವೆಚ್ಚವನ್ನು ಸರ್ಕಾರದಿಂದಲೇ ಭರಿಸುವುದಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.

ದೊಡ್ಡ ರಂಗೇಗೌಡ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಮಂಗಳವಾರ ಆಸ್ಪತ್ರೆಗೆ ಭೇಟಿ ನೀಡಿದ ಸಚಿವ ಶಿವರಾಜ್ ತಂಗಡಗಿ, ಆರೋಗ್ಯ ವಿಚಾರಿಸಿ ಆಸ್ಪತ್ರೆಯ ವೈದ್ಯರಿಂದ ಚಿಕಿತ್ಸೆಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.

ಮುಖ್ಯಮಂತ್ರಿ ಅವರ ಆದೇಶದ ಮೇರೆಗೆ ದೊಡ್ಡರಂಗೇಗೌಡರ ಸಂಪೂರ್ಣ ವೈದ್ಯಕೀಯ ವೆಚ್ಚವನ್ನು ಸರ್ಕಾರದಿಂದಲೇ ಭರಿಸಲಾಗುವುದು. ಅಗತ್ಯವಿರುವ ಎಲ್ಲ ವೈದ್ಯಕೀಯ ಸೌಲಭ್ಯವನ್ನು ಒದಗಿಸಬೇಕು ಎಂದು ವೈದ್ಯರಿಗೆ ಸೂಚಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕುಟುಂಬ ಸದಸ್ಯರನ್ನು ಭೇಟಿ ಮಾಡಿ ಧೈರ್ಯ ತುಂಬಿದ ಅವರು, ದೊಡ್ಡ ರಂಗೇಗೌಡರು ಕನ್ನಡ ಸಾಂಸ್ಕೃತಿಕ ಲೋಕದ ಆಸ್ತಿಯಾಗಿದ್ದು, ಅವರ ಬಗ್ಗೆ ಅಪಾರವಾದ ಕಾಳಜಿ ಇದೆ. ಸರ್ಕಾರದಿಂದ ಅವರಿಗೆ ಎಲ್ಲಾ ರೀತಿಯ ನೆರವು ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular