ಬೆಂಗಳೂರು : ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಕುಟುಂಬಕ್ಕೆ ಆಹ್ವಾನ ನೀಡಲಾಗಿದೆ.
ಇಂದು ಮಾಜಿ ಸಿಎಂ ಕುಮಾರಸ್ವಾಮಿ ಭೇಟಿಯಾದ ಅಖಿಲ ಭಾರತೀಯ ಸಂಪರ್ಕ್ ಪ್ರಮುಖ್ ಆಗಿರುವ ರಾಮ ಲಾಲ್ ಅವರು ಹಾಗೂ ಇತರರು ಶ್ರೀರಾಮ ಜನ್ಮಭೂಮಿ ಟ್ರಸ್ಟ್ ಪರವಾಗಿ ಆಹ್ವಾನ ನೀಡಿದರು.
ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಶ್ರೀರಾಮ ಮಂದಿರದಲ್ಲಿ ಜನವರಿ 22ರಂದು ನಡೆಯಲಿರುವ ಶ್ರೀ ರಾಮದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ದ ಅಖಿಲ ಭಾರತೀಯ ಸಂಪರ್ಕ್ ಪ್ರಮುಖ್ ಆಗಿರುವ ಶ್ರೀ ರಾಮ ಲಾಲ್ ಅವರು ಹಾಗೂ ಇತರರು ಶ್ರೀರಾಮ ಜನ್ಮಭೂಮಿ ಟ್ರಸ್ಟ್ ಪರವಾಗಿ ಆಹ್ವಾನ ನೀಡಿದರು. ನನ್ನನ್ನು ಆಹ್ವಾನಿಸಿದ ಅವರೆಲ್ಲರಿಗೂ ಧನ್ಯವಾದಗಳು. ಶ್ರೀ ರಾಮದೇವರ ಪ್ರಾಣ ಪ್ರತಿಷ್ಠೆ ಹಾಗೂ ಶ್ರೀರಾಮ ಸೇವಾ ಕೈಂಕರ್ಯದಲ್ಲಿ ಕುಟುಂಬ ಸಮೇತವಾಗಿ ಸಂತೋಷದಿಂದ ಭಾಗಿಯಾಗುತ್ತೇನೆ ಎಂದಿದ್ದಾರೆ.
https://twitter.com/hd_kumaraswamy/status/1739525154374586477?ref_src=twsrc%5Etfw%7Ctwcamp%5Etweetembed%7Ctwterm%5E1739521137191928312%7Ctwgr%5Eacdb606d378ff911e615840c645d37291925f9f7%7Ctwcon%5Es1_&ref_url=https%3A%2F%2Fwww.vijayavani.net%2Fformer-cm-h-d-kumaraswamy-family-has-been-invited-for-the-inauguration-of-ayodhya-ram-mandir