1988 ರಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಓರ್ವ ವ್ಯಕ್ತಿಯ ಸಾವಿಗೆ ಕಾರಣವಾಗಿದ್ದ ಹಿನ್ನೆಲೆಯಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿದ್ದು ನಾಳೆ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.
ಸನ್ನಡತೆ ಆಧಾರದಲ್ಲಿ ಏಪ್ರಿಲ್ 1 ರಂದು ನವಜೋತ್ ಸಿಂಗ್ ಸಿದ್ದು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ ಎಂದು ಜೈಲಿನ ಮೂಲಗಳು ತಿಳಿಸಿವೆ.
ಅಪಘಾತ ಪ್ರಕರಣದಲ್ಲಿ ನವಜೋತ್ ಸಿಂಗ್ ಸಿದ್ದು ಅವರಿಗೆ ನ್ಯಾಯಾಲಯ ಒಂದು ವರ್ಷದ ಜೈಲು ಶಿಕ್ಷೆ ವಿಧಿಸಿತ್ತು. ಸನ್ನಡತೆ ಕಾರಣಕ್ಕೆ ಮುಂಚಿತವಾಗಿಯೇ ಬಿಡುಗಡೆಯಾಗುತ್ತಿದ್ದಾರೆ.
https://twitter.com/DrDrnavjotsidhu/status/1641656832623095812?ref_src=twsrc%5Etfw%7Ctwcamp%5Etweetembed%7Ctwterm%5E1641656832623095812%7Ctwgr%5E94ecee4cadf9d74a9a53023a1da49421e16886c1%7Ctwcon%5Es1_&ref_url=https%3A%2F%2Fwww.hindustantimes.com%2Findia-news%2Fasked-for-my-death-navjot-singh-sidhu-s-wife-says-before-his-likely-release-101680248337792.html