HomeKarnatakaಚೆನ್ನಮ್ಮ ದೇವೇಗೌಡರ ಪಾರ್ಥಿವ ಶರೀರ ಅಂತಿಮ ಯಾತ್ರೆ ಸಾಗುವ ಮಾರ್ಗ

ಚೆನ್ನಮ್ಮ ದೇವೇಗೌಡರ ಪಾರ್ಥಿವ ಶರೀರ ಅಂತಿಮ ಯಾತ್ರೆ ಸಾಗುವ ಮಾರ್ಗ

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ಅವರು ಉಸಿರಾಟ ಸಮಸ್ಯೆಯಿಂದ ನಿಧನರಾಗಿದ್ದು, ಬೆಂಗಳೂರಿನ ಪದ್ಮನಾಭನಗರದಲ್ಲಿರುವ ನಿವಾಸದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ನಂತರ ಬೆಂಗಳೂರಿನಿಂದ ಹಾಸನ ಜಿಲ್ಲೆ ಹೊಳೆನರಸೀಪುರಕ್ಕೆ ಪಾರ್ಥಿವ ಶರೀರ ಕೊಂಡೊಯ್ಯಲಿದ್ದು, ಸೋಮವಾರ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು.

19-07-2026 ಭಾನುವಾರ, ಬೆಳಗ್ಗೆ 7 ರಿಂದ 11 ಗಂಟೆಯವರೆಗೆ  ಬೆಂಗಳೂರಿನ ಪದ್ಮನಾಭನಗರದಲ್ಲಿ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಂತರ ಪಾರ್ಥಿವ ಶರೀರವನ್ನು ಹೊಳೆನರಸೀಪುರಕ್ಕೆ ಕೊಂಡೊಯ್ಯಲಾಗುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನೆಲಮಂಗಲ ಕ್ರಾಸ್, ಸೋಲೂರು ಕ್ರಾಸ್, ಮರೂರು ಹ್ಯಾಂಡ್ ಪೋಸ್ಟ್, ಕುಣಿಗಲ್ ಕ್ರಾಸ್, ಬೆಳ್ಳೂರು ಕ್ರಾಸ್, ಕದಬಳ್ಳಿ ಕ್ರಾಸ್, ಹಿರಿಸಾವೆ ಕ್ರಾಸ್, ಚನ್ನರಾಯಪಟ್ಟಣ, ಎಲೆಯೂರು(ಉದಯಪುರ0, ಶಾಂತಿಗ್ರಾಮ, ಭೂನಳ್ಳಿ ಕ್ರಾಸ್, ಹಾಸನ ಡೈರಿ ಸರ್ಕಲ್, ಎನ್ಆರ್ ಸರ್ಕಲ್, ಮೊಸಳೆ ಹೊಸಹಳ್ಳಿ ಮಾರ್ಗವಾಗಿ ತೆರಳಿ ರಾತ್ರಿ ಹೊಳೆನರಸೀಪುರದಲ್ಲಿರುವ ರೇವಣ್ಣನವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಜುಲೈ 20ರಂದು ಸೋಮವಾರ ಬೆಳಗ್ಗೆ 7 ಗಂಟೆಯಿಂದ 9:30ವರೆಗೆ ಹೆಚ್.ಡಿ. ರೇವಣ್ಣ ಅವರ ಹೊಳೆನರಸೀಪುರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಬೆಳಗ್ಗೆ 10 ಗಂಟೆಗೆ ಹೊಳೆನರಸೀಪುರದಿಂದ ಹೊರಟು 11.30 ಮಾವಿನಕೆರೆ ಶ್ರೀರಂಗನಾಥ ಸ್ವಾಮಿ ಬೆಟ್ಟದ ತಪ್ಪಲು ಹಳೇಕೋಟೆಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಮಧ್ಯಾಹ್ನ 2 ರಿಂದ ಸಂಜೆ 4:15 ರವರೆಗೆ ಅಂತ್ಯಕ್ರಿಯೆ ವಿಧಿ ವಿಧಾನ ನೆರವೇರಿಸಲಾಗುವುದು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular