ಮುಡಾ ಹಗರಣದಲ್ಲಿ ‘ಅಂತಿಮ ಗೆಲುವು’ ಸತ್ಯದ್ದೇ ಆಗಿರಲಿದೆ : ಸಿಎಂ ಸಿದ್ದರಾಮಯ್ಯ ವಿಶ್ವಾಸ

ಬೆಂಗಳೂರು : ಸಂವಿಧಾನ ಮತ್ತು ನ್ಯಾಯಾಂಗ ವ್ಯವಸ್ಥೆಯ ಮೇಲೆ ಅಪಾರ ನಂಬಿಕೆಯಿಟ್ಟಿರುವ, ಈ ನೆಲದ ಕಾನೂನನ್ನು ಗೌರವಿಸುವ ಓರ್ವ ಪ್ರಜೆಯಾಗಿ ಸುಳ್ಳು ಪ್ರಕರಣದಲ್ಲಿ ನನ್ನ ಮೇಲೆ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರ ರಾಜಕೀಯ ಪ್ರೇರಿತ ನಿರ್ಣಯದ ವಿರುದ್ಧ ಘನ ಉಚ್ಛ ನ್ಯಾಯಾಲಯದ ಮೊರೆ ಹೋಗಿದ್ದೇನೆ. ಅಂತಿಮ ಗೆಲುವು ಸತ್ಯದ್ದೇ ಆಗಿರಲಿದೆ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಸಂವಿಧಾನ ಮತ್ತು ನ್ಯಾಯಾಂಗ ವ್ಯವಸ್ಥೆಯ ಮೇಲೆ ಅಪಾರ ನಂಬಿಕೆಯಿಟ್ಟಿರುವ, ಈ ನೆಲದ ಕಾನೂನನ್ನು ಗೌರವಿಸುವ ಓರ್ವ ಪ್ರಜೆಯಾಗಿ ಸುಳ್ಳು ಪ್ರಕರಣದಲ್ಲಿ ನನ್ನ ಮೇಲೆ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರ ರಾಜಕೀಯ ಪ್ರೇರಿತ ನಿರ್ಣಯದ ವಿರುದ್ಧ ಘನ ಉಚ್ಛ ನ್ಯಾಯಾಲಯದ ಮೊರೆ ಹೋಗಿದ್ದೇನೆ. ಉಚ್ಚ ನ್ಯಾಯಾಲಯವು ಈ ವಿಚಾರವನ್ನು ಆಲಿಸಿ, ಮುಂದಿನ ವಿಚಾರಣೆಯ ವರೆಗೆ ವಿಶೇಷ ನ್ಯಾಯಾಲಯಗಳು ವಿಚಾರಣೆ ಮುಂದೂಡಬೇಕು, ಯಾವುದೇ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬಾರದು ಎಂಬ ಮಧ್ಯಂತರ ಆದೇಶವನ್ನು ನೀಡಿದೆ. ನ್ಯಾಯಾಲಯದ ಈ ಆದೇಶವನ್ನು ವಿನಮ್ರವಾಗಿ ಸ್ವೀಕರಿಸುತ್ತ ನನ್ನ ಧನ್ಯವಾದ ಸಲ್ಲಿಸುತ್ತೇನೆ. ಅಂತಿಮ ಗೆಲುವು ಸತ್ಯದ್ದೇ ಆಗಿರಲಿದೆ ಎಂಬುದು ನನ್ನ ದೃಢ ನಂಬಿಕೆಯಾಗಿದೆ ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

https://twitter.com/siddaramaiah/status/1825541759151006150

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read