HomeEntertainmentರಾಮ್ ಚರಣ್ ಹುಟ್ಟುಹಬ್ಬಕ್ಕೆ 'ಗೇಮ್ ಚೇಂಜರ್' ನಿಂದ ಬಂತು ಮೊದಲ ಗೀತೆ

ರಾಮ್ ಚರಣ್ ಹುಟ್ಟುಹಬ್ಬಕ್ಕೆ ‘ಗೇಮ್ ಚೇಂಜರ್’ ನಿಂದ ಬಂತು ಮೊದಲ ಗೀತೆ

ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಇಂದು 39ನೇ ವಸಂತಕ್ಕೆ ಕಾಲಿಟ್ಟಿದ್ದು ಅವರ ಅಭಿಮಾನಿಗಳು ವಿವಿಧ ರೀತಿಯಲ್ಲಿ ಸಂಭ್ರಮಿಸುತಿದ್ದಾರೆ. ರಾಮ್ ಚರಣ್ ಅಭಿನಯದ ಬಹು ನಿರೀಕ್ಷಿತ ‘ಗೇಮ್ ಚೇಂಜರ್’ ಚಿತ್ರದ ಮೊದಲ ಲಿರಿಕಲ್ ಹಾಡು ಇಂದು ಸರಿಗಮ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ‘ಜರಗಂಡಿ’ ಎಂಬ ಈ ಹಾಡಿಗೆ ದಲೇರ್ ಮೆಹಂದಿ ಮತ್ತು ಸುನಿಧಿ ಚೌಹಾಣ್ ಧ್ವನಿಯಾಗಿದ್ದು, ಅನಂತ ಶ್ರೀರಾಮ್ ಸಾಹಿತ್ಯ ಬರೆದಿದ್ದಾರೆ.

ಶಂಕರ್ ನಿರ್ದೇಶನದ ಈ ಚಿತ್ರದಲ್ಲಿ ರಾಮ್ ಚರಣ್ಗೆ ಜೋಡಿಯಾಗಿ ಕಿಯಾರ ಅಡ್ವಾಣಿ ಅಭಿನಯಿಸಿದ್ದು, ಅಂಜಲಿ, ಜಯರಾಮ್, ಸುನಿಲ್, ಶ್ರೀಕಾಂತ್, ನವೀನ್ ಚಂದ್ರ, ಅಜಯ್ ರಾಜ್, ವೈಭವ್ ರೆಡ್ಡಿ, ಉಳಿದ ಪಾತ್ರ ವರ್ಗದಲ್ಲಿದ್ದಾರೆ. ತಮನ್ ಎಸ್ ಸಂಗೀತ ಸಂಯೋಜನೆ ನೀಡಿದ್ದು, ತಿರುನೌಕ್ಕರಸು ಛಾಯಾಗ್ರಾಹಣ, ಸಾಯಿ ಮಹದೇವ್ ಸಂಭಾಷಣೆ ಬರೆದಿದ್ದಾರೆ. ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಬ್ಯಾನರ್ ನಲ್ಲಿ ದಿಲ್ ರಾಜು ಮತ್ತು ಸಿರೀಶ್ ನಿರ್ಮಾಣ ಮಾಡಿದ್ದಾರೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular