HomeEntertainmentರಿಲೀಸ್ ಆಯ್ತು 'ಕೇಡಿ' ಚಿತ್ರದ ಮೊದಲ ಗೀತೆ

ರಿಲೀಸ್ ಆಯ್ತು ‘ಕೇಡಿ’ ಚಿತ್ರದ ಮೊದಲ ಗೀತೆ

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಪ್ಯಾನ್ ಇಂಡಿಯಾ ಚಿತ್ರ ‘ಕೇಡಿ’ ಈಗಾಗಲೇ ಸಾಕಷ್ಟು ನಿರೀಕ್ಷೆ  ಮೂಡಿಸಿದ್ದು, ಇನ್ನೇನು ತೆರೆ ಮೇಲೆ ಬರಲು ಸಜ್ಜಾಗಿದೆ. ಇದರ ಮೊದಲ ಹಾಡು  ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ. ಕನ್ನಡದಲ್ಲಿ ನಿರ್ದೇಶಕ ಪ್ರೇಮ್ ಮತ್ತು ಕೈಲಾಶ್ ಖೇರ್ ಧ್ವನಿಯಾದರೆ. ತೆಲುಗು ಮತ್ತು ತಮಿಳಿನಲ್ಲಿ ವಿಜಯ್ ಪ್ರಕಾಶ್ ಮತ್ತು ಕೈಲಾಶ್ ಖೇರ್  ಧ್ವನಿಯಲ್ಲಿ ಮೂಡಿ ಬಂದಿದೆ. ಒಟ್ಟಾರೆ ಐದು ಭಾಷೆಗಳಲ್ಲಿ ಈ ಹಾಡನ್ನು ರಿಲೀಸ್ ಮಾಡಲಾಗಿದೆ.

ಈ ಚಿತ್ರದಲ್ಲಿ ಧ್ರುವ ಸರ್ಜಾ ಅವರಿಗೆ ಜೋಡಿಯಾಗಿ ರೀಷ್ಮಾ ನಾಣಯ್ಯ  ಅಭಿನಯಿಸಿದ್ದು, ವಿ ರವಿಚಂದ್ರನ್, ರಮೇಶ್ ಅರವಿಂದ್, ಸಂಜಯ್ ದತ್, ಶಿಲ್ಪಾ ಶೆಟ್ಟಿ, ನೋರಾ ಫತೇಹಿ, ಯಶ್ ಶೆಟ್ಟಿ ಉಳಿದ ತಾರಾಂಗಣದಲ್ಲಿದ್ದಾರೆ. ಕೆವಿಎನ್ ಪ್ರೊಡಕ್ಷನ್ಸ್ ಸಂಸ್ಥೆ ನಿರ್ಮಾಣ ಮಾಡಿದ್ದು, ಅರ್ಜುನ್ ಜನ್ಯ ಸಂಗೀತ ಸಂಯೋಜನೆ ನೀಡಿದ್ದಾರೆ. ಕ್ರಾಂತಿ ಕುಮಾರ್ ಸಂಭಾಷಣೆ,  ಹಾಗೂ ವಿಲಿಯಂ ಡೇವಿಡ್ ಛಾಯಾಗ್ರಾಣವಿದೆ.

For Latest News Updates, Join Our Whatsapp Community🚩
RELATED ARTICLES

Most Popular