HomeEntertainmentಜನವರಿ 19ಕ್ಕೆ ರಿಲೀಸ್ ಆಗಲಿದೆ 'ಕೆಟಿಎಂ' ಚಿತ್ರದ ಮೊದಲ ಹಾಡು

ಜನವರಿ 19ಕ್ಕೆ ರಿಲೀಸ್ ಆಗಲಿದೆ ‘ಕೆಟಿಎಂ’ ಚಿತ್ರದ ಮೊದಲ ಹಾಡು

ಅರುಣ ನಿರ್ದೇಶನದ ದೀಕ್ಷಿತ್ ಶೆಟ್ಟಿ ಅಭಿನಯದ ಕೆಟಿಎಂ ಚಿತ್ರದ ಮೊದಲ ಹಾಡು ಇದೇ ಜನವರಿ 19ರಂದು a2 ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಆಗಲಿದೆ.

ಈ ಕುರಿತು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದೆ. ”ಸೋಜಿಗ ಸೋಜಿಗ” ಎಂಬ ಈ ಹಾಡಿಗೆ ಸಂಜಿತ್ ಹೆಗಡೆ ಧ್ವನಿಯಾಗಿದ್ದು, ಚೇತನ್ ರಾವ್ ಸಂಗೀತ ಸಂಯೋಜನೆ ನೀಡಿದ್ದಾರೆ.

‘ಕೆಟಿಎಂ’ ಚಿತ್ರವನ್ನು ವಿನಯ್ ನಿರ್ಮಾಣ ಮಾಡಿದ್ದು, ರಕ್ಷಯ್ ಸಹ ನಿರ್ಮಾಪಕರಾಗಿ ಕೆಲಸ ಮಾಡಿದ್ದಾರೆ. ದೀಕ್ಷಿತ್ ಶೆಟ್ಟಿ ಸೇರಿದಂತೆ ಸಂಜನಾ ದಾಸ್, ಮತ್ತು ಕಾಜಲ್ ಕುಂದರ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಅರ್ಜುನ್ ಕಿಟ್ಟು ಸಂಕಲನ, ನವೀನ್ ಕುಮಾರ್ ಛಾಯಾಗ್ರಹಣ ಮತ್ತು ಅಭಿನಂದನ್ ಡೈಲಾಗ್ ಬರೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular