HomeEntertainmentಆಗಸ್ಟ್ 14ಕ್ಕೆ 'ರಾಯಲ್' ಚಿತ್ರದ ಮೊದಲ ಗೀತೆ

ಆಗಸ್ಟ್ 14ಕ್ಕೆ ‘ರಾಯಲ್’ ಚಿತ್ರದ ಮೊದಲ ಗೀತೆ

ದಿನಕರ್ S ನಿರ್ದೇಶನದ ವಿರಾಟ್ ಅಭಿನಯದ ‘ರಾಯಲ್’ ಚಿತ್ರದ ಮೊದಲ ಹಾಡು ಇದೆ ಆಗಸ್ಟ್ 14ರಂದು ಸರಿಗಮ ಕನ್ನಡ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ.

ಈ ಕುರಿತು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ‘ನಾನೇ ಕೃಷ್ಣ ನಾನೇ ಶಾಮ’ ಎಂಬ ಈ ಹಾಡಿಗೆ ಸಂಜೀತ್ ಹೆಗಡೆ ಧ್ವನಿಯಾಗಿದ್ದು, ಚರಣ್ ರಾಜ್ ಸಂಗೀತ ಸಂಯೋಜನೆ ನೀಡಿದ್ದಾರೆ. ಇನ್ನುಳಿದಂತೆ ಡಾ. ವಿ ನಾಗೇಂದ್ರ ಪ್ರಸಾದ್ ಸಾಹಿತ್ಯವಿದೆ.

ಈ ಚಿತ್ರದಲ್ಲಿ ವಿರಾಟ್ ಗೆ ಜೋಡಿಯಾಗಿ ಸಂಜನಾ ಆನಂದ್ ಅಭಿನಯಿಸಿದ್ದು, ಜಯಣ್ಣ ಫಿಲಂಸ್ ಬ್ಯಾನರ್ ನಲ್ಲಿ ಬ್ಯಾನರ್ ನಲ್ಲಿ ಜಯಣ್ಣ- ಬೋಗೇಂದ್ರ ನಿರ್ಮಾಣ ಮಾಡಿದ್ದಾರೆ. ರಘು ಮುಖರ್ಜಿ, ಛಾಯಾ ಸಿಂಗ್, ಅಚ್ಯುತ್ ಕುಮಾರ್, ರಂಗಾಯಣ ರಘು, ಪ್ರಮೋದ್ ಶೆಟ್ಟಿ, ರವಿ ಭಟ್, ಗೋಪಾಲ್ ದೇಶಪಾಂಡೆ, ಅಭಿಲಾಷ್ ಉಳಿದ ಪಾತ್ರ ವರ್ಗದಲ್ಲಿದ್ದಾರೆ. ಕೆ ಎಂ ಪ್ರಕಾಶ್ ಸಂಕಲನ, ಸಂಕೇತ್ ಛಾಯಾಗ್ರಹಣ, ಡಾ. ರವಿವರ್ಮ ಸಾಹಸ ನಿರ್ದೇಶನವಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular