HomeEntertainmentಶೀಘ್ರದಲ್ಲೇ ಬರಲಿದೆ 'ತಾಂಡೆಲ್' ಚಿತ್ರದ ಮೊದಲ ಗೀತೆ

ಶೀಘ್ರದಲ್ಲೇ ಬರಲಿದೆ ‘ತಾಂಡೆಲ್’ ಚಿತ್ರದ ಮೊದಲ ಗೀತೆ

ನಾಗಚೈತನ್ಯ ಹಾಗೂ ಸಾಯಿ ಪಲ್ಲವಿ ಅಭಿನಯಿಸುತ್ತಿರುವ ‘ತಾಂಡೇಲ್’ ಚಿತ್ರದ ‘ಬುಜ್ಜಿ’ ಎಂಬ ಮೊದಲ ಹಾಡು ಇದೆ ನವೆಂಬರ್ ತಿಂಗಳಲ್ಲಿ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ಘೋಷಣೆ ಮಾಡಿದೆ.

ಚಂದೂ ಮೊಂಡೇಟಿ ನಿರ್ದೇಶನದ ಈ ಚಿತ್ರವನ್ನು ಗೀತಾ ಆರ್ಟ್ಸ್ ಬ್ಯಾನರ್ ನಲ್ಲಿ ಬನ್ನಿ ವಾಸು ನಿರ್ಮಾಣ ಮಾಡಿದ್ದು, ರಿಯಾಜ್ ಚೌದರಿ, ಬಾನು ಪ್ರತಾಪ್ ಸಹ ನಿರ್ಮಾಪಕರಾಗಿದ್ದಾರೆ.

ದೇವಿಶ್ರೀ ಪ್ರಸಾದ್ ಸಂಗೀತ ಸಂಯೋಜನೆ ನೀಡಿದ್ದು, ನವೀನ್ ನೂಲಿ ಸಂಕಲನ, ಶಾಮ್ ದತ್ ಛಾಯಾಗ್ರಹಣವಿದೆ. ರೋಮ್ಯಾಂಟಿಕ್ ಲವ್ ಸ್ಟೋರಿ ಕಥಾಹಂದರ ಹೊಂದಿರುವ ಈ ಸಿನಿಮಾ ಫೆಬ್ರವರಿ 7ಕ್ಕೆ ತೆರೆ  ಕಾಣಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular