HomeEntertainmentಇಂದು ಬಿಡುಗಡೆಯಾಗಲಿದೆ 'ಸಲಾರ್' ಚಿತ್ರದ ಮೊದಲ ಹಾಡು

ಇಂದು ಬಿಡುಗಡೆಯಾಗಲಿದೆ ‘ಸಲಾರ್’ ಚಿತ್ರದ ಮೊದಲ ಹಾಡು

ಪ್ರಶಾಂತ್ ನೀಲ್ ನಿರ್ದೇಶನದ ಪ್ರಭಾಸ್ ಅಭಿನಯದ ಬಹುನಿರೀಕ್ಷಿತ ‘ಸಲಾರ್’ ಸಿನಿಮಾ ಒಂದರ ಮೇಲೊಂದು ದಾಖಲೆ ಬರೆಯುತ್ತಿದ್ದು, ಡಿಸೆಂಬರ್ 22ರಂದು ತೆರೆ ಮೇಲೆ ಅಪ್ಪಳಿಸಲು ಸಜ್ಜಾಗಿದೆ. ಇಂದು ಈ ಚಿತ್ರದ ‘ಆಕಾಶ ಗಡಿಯ’ ಎಂಬ ಮೊದಲ ಹಾಡು  ಕನ್ನಡ ಸೇರಿದಂತೆ ತೆಲುಗು, ಮಲಯಾಳಂ, ಹಿಂದಿ, ಹಾಗೂ ತಮಿಳು ಭಾಷೆಯಲ್ಲಿ ಬಿಡುಗಡೆಯಾಗುತ್ತಿದೆ.

ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಹೊಂಬಾಳೆ ಫಿಲಂಸ್ ಬ್ಯಾನರ್ ನಡಿ ವಿಜಯ್ ಕಿರಗಂದೂರು ನಿರ್ಮಾಣ ಮಾಡಿದ್ದು, ಪ್ರಭಾಸ್ ಸೇರಿದಂತೆ ಶ್ರುತಿ ಹಾಸನ್, ಪೃಥ್ವಿರಾಜ್ ಸುಕುಮಾರನ್, ಜಗಪತಿ ಬಾಬು, ಸಪ್ತಗಿರಿ, ಮಧು ಗುರುಸ್ವಾಮಿ, ಈಶ್ವರಿ ರಾವ್, ಶ್ರೇಯಾ ರೆಡ್ಡಿ ಸೇರಿದಂತೆ ಮೊದಲ ಕಲಾವಿದರು ಬಣ್ಣ ಹಚ್ಚಿದ್ದಾರೆ. ಇನ್ನುಳಿದಂತೆ ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರ್ ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular