HomeEntertainmentಮಾರ್ಚ್2ಕ್ಕೆ ಬಿಡುಗಡೆಯಾಗಲಿದೆ 'ಯುವ' ಚಿತ್ರದ ಮೊದಲ ಹಾಡು

ಮಾರ್ಚ್2ಕ್ಕೆ ಬಿಡುಗಡೆಯಾಗಲಿದೆ ‘ಯುವ’ ಚಿತ್ರದ ಮೊದಲ ಹಾಡು

ಯುವರಾಜ್ ಕುಮಾರ್ ಅಭಿನಯದ ಬಹುನಿರೀಕ್ಷಿತ ‘ಯುವ’ ಚಿತ್ರದ ಮೊಟ್ಟ ಮೊದಲ ಹಾಡು ಇದೇ ಮಾರ್ಚ್ 2ನೇ ತಾರೀಕಿನಂದು ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಲಿದೆ.

ಈ ಕುರಿತು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ಘೋಷಣೆ ಮಾಡಿದೆ. ”ಒಬ್ಬನೇ ಶಿವ ಒಬ್ಬನೇ ಯುವ” ಎಂಬ ಈ ಹಾಡನ್ನು ಚಾಮರಾಜನಗರ ಟೆಂಪಲ್ ಗ್ರೌಂಡ್ ನಲ್ಲಿ ರಿಲೀಸ್ ಮಾಡಲಾಗುತ್ತಿದೆ.

ಸಂತೋಷ್ ಆನಂದ್ ರಾಮ್ ಈ ಚಿತ್ರಕ್ಕೆ  ಆಕ್ಷನ್ ಕಟ್ ಹೇಳಿದ್ದು, ಹೊಂಬಾಳೆ ಫಿಲಂಸ್ ಬ್ಯಾನರ್ ನಲ್ಲಿ ವಿಜಯ್ ಕಿರಗಂದೂರು ನಿರ್ಮಾಣ ಮಾಡಿದ್ದಾರೆ. ಯುವ ರಾಜಕುಮಾರ್ ಅವರಿಗೆ ಜೋಡಿಯಾಗಿ ಸಪ್ತಮಿ ಗೌಡ ಅಭಿನಯಿಸಿದ್ದು, ಅಜನಿಶ್ ಲೋಕನಾಥ್ ಸಂಗೀತ ಸಂಯೋಜನೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular