ವ್ಯಾಟಿಕನ್ ಸಿಟಿ: ಕಳೆದ ಸೋಮವಾರ ನಿಧನರಾದ ಕ್ರೈಸ್ತರ ಪರಮೋಚ್ಚ ಗುರು ಪೋಪ್ ಪ್ರಾನ್ಸಿಸ್ ಅಂತ್ಯಕ್ರಿಯ ಶನಿವಾರ ನಡೆಯಲಿದೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ 130 ದೇಶಗಳ ಮುಖ್ಯಸ್ಥರು ಅಂತ್ಯಕ್ರಿಯೆಯಲ್ಲಿ ಭಾಗವಹಿಸಲಿದ್ದಾರೆ. ಪೋಪ್ ಅವರ ಪಾರ್ಥಿವ ಶರೀರದ ಮೂರು ದಿನಗಳ ಸಾರ್ವಜನಿಕ ಅಂತಿಮ ದರ್ಶನ ಶುಕ್ರವಾರ ಸಂಜೆ 7 ಗಂಟೆಗೆ ಮುಕ್ತಾಯವಾಗಿದ್ದು, ನಂತರ ಅಂತ್ಯಕ್ರಿಯ ಸಿದ್ಧತೆ ಆರಂಭವಾಗಿದೆ.
ಮೃತದೇಹ ಇರಿಸಿರುವ ಪೆಟ್ಟಿಗೆಯನ್ನು ಮುಚ್ಚಲಾಗಿದೆ. ಅದಕ್ಕೂ ಮುನ್ನ ಕ್ಯಾಮೆರ್ಲೆಂಗೋ ಕಾರ್ಡಿನಲ್ ಕೆವಿನ್ ಫಾರೆಲ್ ಪೋಪ್ ಅವರ ಮುಖದ ಮೇಲೆ ಬಿಳಿ ಬಟ್ಟೆ ಹಾಕಿ, ಪೋಪ್ ಅಧಿಕಾರವಧಿ ಸಮಯದಲ್ಲಿ ಮುದ್ರಿಸಿದ ನಾಣ್ಯಗಳನ್ನು ಹೊಂದಿರುವ ಒಂದು ಚೀಲವನ್ನು ಶವಪೆಟ್ಟಿಗೆಯಲ್ಲಿ ಇಟ್ಟಿದ್ದಾರೆ.
ಭಾರತದ ಕಾಲಮಾನ ಮಧ್ಯಾಹ್ನ 1:30 ಕ್ಕೆ ವ್ಯಾಟಿಕನ್ ಸಿಟಿಯ ಸೇಂಟ್ ಪೀಟರ್ಸ್ ಸ್ಕ್ವೇರ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.