HomeKarnatakaBIG NEWS : ರಾಜ್ಯದಲ್ಲಿ ಬಾಣಂತಿಯರ ಸಾವಿನ ಪ್ರಕರಣಗಳ ತನಿಖೆಗೆ ಸರ್ಕಾರದಿಂದ ಸಮಿತಿ ರಚನೆ.!

BIG NEWS : ರಾಜ್ಯದಲ್ಲಿ ಬಾಣಂತಿಯರ ಸಾವಿನ ಪ್ರಕರಣಗಳ ತನಿಖೆಗೆ ಸರ್ಕಾರದಿಂದ ಸಮಿತಿ ರಚನೆ.!

ಬೆಂಗಳೂರು : ರಾಜ್ಯದಲ್ಲಿ ಬಾಣಂತಿಯರ ಸಾವಿನ ಪ್ರಕರಣಗಳ ತನಿಖೆಗೆ ಸಮಿತಿ ರಚಿಸಿ ಸರ್ಕಾರ ಆದೇಶ ಹೊರಡಿಸುವುದಾಗಿ ತಿಳಿಸಿದೆ.

ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಸಂಭವಿಸಿರುವ ಬಾಣಂತಿಯರ ಸಾವಿನ ಪ್ರಕರಣಗಳ ತನಿಖೆಗೆ ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿ ರಚಿಸಿ, ವಾರದೊಳಗೆ ವರದಿ ಪಡೆಯಲಾಗುವುದು. ಔಷಧ ನಿಯಂತ್ರಣ ಕಾಯ್ದೆಯನ್ನು ಇನ್ನಷ್ಟು ಬಿಗಿಗೊಳಿಸುವ ಕುರಿತು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲು ಕೂಡ ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ ನಾಲ್ವರು ಬಾಣಂತಿಯರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಬಾಣಂತಿಯರ ಕುಟುಂಬಕ್ಕೆ ರಾಜ್ಯ ಸರ್ಕಾರ ₹ 2 ಲಕ್ಷ ಪರಿಹಾರ ಘೋಷಿಸಿದೆ. ಅಲ್ಲದೇ, ಸಾವಿಗೆ ಕಾರಣವಾದ ಔಷಧ ಪೂರೈಸಿದ ಕಂಪನಿಯಿಂದಲೂ ಪರಿಹಾರ ವಸೂಲಿ ಮಾಡಿ, ಮೃತರ ಕುಟುಂಬಕ್ಕೆ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular