HomeLatest Newsಧರ್ಮಸ್ಥಳ ಕೇಸ್ ಬಗ್ಗೆ ಎಸ್ಐಟಿ ರಚಿಸಿ ಎಡವಟ್ಟು ಮಾಡ್ತಾ ಸರ್ಕಾರ..? ಸ್ವಪಕ್ಷದ ಮೇಲೆ ರಾಜಣ್ಣ ಕಿಡಿ

ಧರ್ಮಸ್ಥಳ ಕೇಸ್ ಬಗ್ಗೆ ಎಸ್ಐಟಿ ರಚಿಸಿ ಎಡವಟ್ಟು ಮಾಡ್ತಾ ಸರ್ಕಾರ..? ಸ್ವಪಕ್ಷದ ಮೇಲೆ ರಾಜಣ್ಣ ಕಿಡಿ

ತುಮಕೂರು: ಧರ್ಮಸ್ಥಳ ಪ್ರಕರಣದಲ್ಲಿ ಎಲ್ಲರೂ ಆರಂಭದಲ್ಲಿಯೇ ಎಡವಿದ್ದು, ತಲೆ ಬುರುಡೆ ಇಟ್ಟುಕೊಂಡು ಧರ್ಮಸ್ಥಳಕ್ಕೆ ಅಪಕೀರ್ತಿ ತರುವ ಪ್ರಯತ್ನ ನಡೆಸಲಾಯಿತು ಎಂದು ಮಾಜಿ ಸಚಿವ ಕೆ.ಎನ್. ರಾಜಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರಂಭದಲ್ಲಿ ಏನನ್ನೂ ವಿಚಾರಣೆ ಮಾಡದೇ ತಲೆ ಬುರುಡೆ ಇಟ್ಟುಕೊಂಡು ಧರ್ಮಸ್ಥಳಕ್ಕೆ ಅಪಕೀರ್ತಿ ತರುವ ಪ್ರಯತ್ನ ನಡೆದಿದೆ. ಕೆಲವು ತನಿಖಾ ತಂಡಗಳು ವಿನಾಕಾರಣ ಈ ಪ್ರಕರಣವನ್ನು ದೊಡ್ಡ ಮಟ್ಟಕ್ಕೆ ತೆಗೆದುಕೊಂಡು ಹೋದವು. ಕಂಡ ಕಂಡಲ್ಲಿ ಗುಂಡಿ ತೆಗೆಯುವ ಮೂಲಕ ಅಲ್ಲಿನ ನಿವಾಸಿಗಳಿಗೆ ತೊಂದರೆ ನೀಡಿದ್ದಾರೆ ಎಂದು ಕಿಡಿಕಾರಿದ್ದಾರೆ.

ಪ್ರಾರಂಭಿಕ ಹಂತದಲ್ಲಿ ಸಾಮಾನ್ಯ ಜ್ಞಾನ ಬಳಸಿ ವಿಚಾರಣೆ ಮಾಡಿದ್ದರೆ ಇಷ್ಟೆಲ್ಲ ಅನಾಹುತ ಆಗುತ್ತಿರಲಿಲ್ಲ. ದೂರು ಕೊಡಲು ಬಂದವನ ಪೂರ್ವಪರ ವಿಚಾರಿಸಬೇಕಿತ್ತು. ಅದನ್ನು ಬಿಟ್ಟು ನ್ಯಾಯಾಧೀಶರ ಮುಂದೆ 164 ಸ್ಟೇಟ್ಮೆಂಟ್ ಮಾಡಿಕೊಂಡು ಎಸ್ಐಟಿ ರಚಿಸಿಕೊಂಡು ಇಷ್ಟು ರಾದ್ಧಾಂತ ಮಾಡಿದ್ದಾರೆ. ಆರಂಭದಲ್ಲಿ ತಲೆ ಬುರುಡೆ ತಂದವನನ್ನೇ ವಿಚಾರಣೆ ಮಾಡಬೇಕಿತ್ತು. ಮೊದಲೇ ಇದೆಲ್ಲ ಮಾಡಿದ್ದರೆ ಇಷ್ಟೆಲ್ಲಾ ರಾದ್ಧಾಂತ ಆಗುತ್ತಿರಲಿಲ್ಲ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular