ರಾಜ್ಯದಲ್ಲಿ ಭೂ ಕುಸಿತ ತಡೆಗೆ ಶೀಘ್ರವೇ ಸರ್ಕಾರದಿಂದ ಹೊಸ ನೀತಿ ಜಾರಿ

ಬೆಂಗಳೂರು : ಘಟ್ಟ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಭೂ ಕುಸಿತದ ಪರಿಣಾಮಗಳನ್ನು ತಗ್ಗಿಸುವ ಸಂಬಂಧ ಅಭಿವೃದ್ಧಿ ಕೇಂದ್ರಿತ ಚಟುವಟಿಕೆ ನಿಯಂತ್ರಿಸುವ ನೀತಿಯೊಂದನ್ನು ರೂಪಿಸಲಾಗುತ್ತಿದೆ, ಗುಡ್ಡಗಳನ್ನು ಕಡಿದು ನಿರ್ಮಾಣ ಚಟುವಟಿಕೆ ಕೈಗೊಳ್ಳುವುದು ಸೇರಿ ಹಲವು ಅವೈಜ್ಞಾನಿಕ ಅಭಿವೃದ್ಧಿಗೆ ನಿರ್ಬಂಧಿಸಲು ಉದ್ದೇಶಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಗುಡ್ಡಗಳನ್ನು 90 ಡಿಗ್ರಿಯಲ್ಲಿ ಲಂಬವಾಗಿ ಕತ್ತರಿಸುವುದನ್ನು ತಡೆಯುವುದು, ಗುಡ್ಡದಿಂದ ನೀರು ಸರಾಗವಾಗಿ ಹರಿದುಹೋಗುವಂತೆ ವ್ಯವಸ್ಥೆ ಮಾಡುವುದು ಸೇರಿ ನಿರ್ಮಾಣ ಪರವಾನಗಿಯಲ್ಲಿ ಷರತ್ತು ವಿಧಿಸುವುದು, ಅನಧಿಕೃತ ನಿರ್ಮಾಣ ಚಟುವಟಿಕೆಗಳನ್ನು ನಿರ್ಬಂಧಿಸುವುದು ಒಳಗೊಂಡಂತೆ ಹಲವು ಉಪಕ್ರಮಗಳು ನೀತಿಯಲ್ಲಿ ಇರಲಿವೆ ಎಂದು ಅವರು ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read