HomeIndiaನಮ್ಮ ನಾಯಕರು, ವಿದ್ಯಾರ್ಥಿಗಳನ್ನು ಬಂಧಿಸಿರುವ ಸರ್ಕಾರದ ಸರ್ವಾಧಿಕಾರಿ ನಡೆ ಖಂಡನೀಯ: ಸಿಎಂ ಡಿ.ಕೆ. ಶಿವಕುಮಾರ್

ನಮ್ಮ ನಾಯಕರು, ವಿದ್ಯಾರ್ಥಿಗಳನ್ನು ಬಂಧಿಸಿರುವ ಸರ್ಕಾರದ ಸರ್ವಾಧಿಕಾರಿ ನಡೆ ಖಂಡನೀಯ: ಸಿಎಂ ಡಿ.ಕೆ. ಶಿವಕುಮಾರ್

ನವದೆಹಲಿ: ಯುವಕರು ಈ ದೇಶದ ಶಕ್ತಿ- ಅವರೇ ಮುಂದಿನ ಭವಿಷ್ಯ, ಕಾಂಗ್ರೆಸ್ ಪಕ್ಷ ವಿದ್ಯಾರ್ಥಿಗಳೊಂದಿಗೆ ನಿಂತಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ದೆಹಲಿ ಕರ್ನಾಟಕ ಭವನದಲ್ಲಿ ಮಾತನಾಡಿದ ಸಿಎಂ, ಯುವಕರು ಈ ದೇಶದ ಆಸ್ತಿ ಮತ್ತು ನಮ್ಮ ನಾಳಿನ ಭವಿಷ್ಯ. ಭಾರತದ ಉಜ್ವಲ ಭವಿಷ್ಯ ಯುವ ವಿದ್ಯಾರ್ಥಿಗಳ ಮೇಲೆಯೇ ನಿಂತಿದೆ. 25 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಗಲಿರುಳು ಶ್ರಮಿಸಿ ಪರೀಕ್ಷೆಗೆ ತಯಾರಿ ನಡೆಸಿದ್ದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಂತಹ ಘಟನೆಗಳು ಅವರ ಕನಸು ಮತ್ತು ಶ್ರಮವನ್ನು ಸಂಪೂರ್ಣವಾಗಿ ಮಣ್ಣುಪಾಲು ಮಾಡಿವೆ. ತಮಗೆ ಆಗಿರುವ ಅನ್ಯಾಯವನ್ನು ವಿರೋಧಿಸಿ ಹಾಗೂ ತಮ್ಮ ನೋವನ್ನು ವ್ಯಕ್ತಪಡಿಸಲು ದೇಶದಾದ್ಯಂತ ವಿದ್ಯಾರ್ಥಿಗಳು ಸ್ವಯಂಪ್ರೇರಿತರಾಗಿ, ಶಾಂತಿಯುತವಾಗಿ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಆದರೆ ಪ್ರತಿಭಟನೆ ಮಾಡುತ್ತಿರುವ ಯುವಜನರನ್ನು ಸರ್ಕಾರ ನಡೆಸಿಕೊಳ್ಳುತ್ತಿರುವ ರೀತಿ ಅತ್ಯಂತ ಖಂಡನೀಯವಾಗಿದೆ. ದೇಶದ ಮುಂದಿನ ಭವಿಷ್ಯವಾದ ವಿದ್ಯಾರ್ಥಿಗಳ ಮೇಲೆ ನಡೆಯುತ್ತಿರುವ ಈ ಅನ್ಯಾಯ, ನಿಮ್ಮದೇ ಮಕ್ಕಳ ಮೇಲೆ ಮಾಡುತ್ತಿರುವ ಹಲ್ಲೆಯಲ್ಲವೇ ಎಂಬ ಪ್ರಶ್ನೆ ಮೂಡುತ್ತದೆ. ಈ ಕಷ್ಟದ ಸಮಯದಲ್ಲಿ ಕಾಂಗ್ರೆಸ್ ಪಕ್ಷವು ವಿದ್ಯಾರ್ಥಿಗಳು, ಯುವಜನರು ಮತ್ತು ಪೋಷಕರ ಪರವಾಗಿ ಗಟ್ಟಿಯಾಗಿ ನಿಂತಿದ್ದು, ಅವರ ಭಾವನೆಗಳಿಗೆ ಸ್ಪಂದಿಸಿ ಧ್ವನಿ ಎತ್ತಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಲು ರಾಹುಲ್ ಗಾಂಧಿ ಅವರು ಹೋರಾಟದ ಮುಂಚೂಣಿಯಲ್ಲಿದ್ದರೆ, ಪ್ರಿಯಾಂಕಾ ಗಾಂಧಿ ಅವರು ಕೂಡ ನೇರವಾಗಿ ಭಾಗಿಯಾಗಿದ್ದಾರೆ. ಸಂಕಷ್ಟದಲ್ಲಿದ್ದಾಗ ಜನರ ಪರವಾಗಿ ನಿಂತು ಹೋರಾಡುವುದೇ ಗಾಂಧಿ ಕುಟುಂಬದ ನೈಜ ಶಕ್ತಿಯಾಗಿದೆ. ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ನಮ್ಮ ನಾಯಕರನ್ನು ಮತ್ತು ವಿದ್ಯಾರ್ಥಿಗಳನ್ನು ಬಂಧಿಸಿರುವ ಸರ್ಕಾರದ ಸರ್ವಾಧಿಕಾರಿ ನಡೆಯನ್ನು ಕರ್ನಾಟಕ ರಾಜ್ಯ ಸೇರಿದಂತೆ ಇಡೀ ದೇಶವು ತೀವ್ರವಾಗಿ ಖಂಡಿಸುತ್ತದೆ. ಇದು ಭಾರತದ ಯುವಜನತೆಯ ಬದುಕಿನ ಪ್ರಶ್ನೆಯಾಗಿದ್ದು, ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕಾಗಿ ಈ ಹೋರಾಟ ಮುಂದುವರಿಯಲಿದೆ ಎಂದು ಸಿಎಂ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular