ಬೆಂಗಳೂರು : ವಿಧಾನಸಭೆಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಇಂದು ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ ಮಂಡಿಸಿದ್ದಾರೆ.
ವಿಧಾನಸಭೆಯಲ್ಲಿ 2025 ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕವನ್ನು ಸ್ಪೀಕರ್ ಯುಟಿ ಖಾದರ್ ಅಂಗೀಕರಿಸಿದ್ದಾರೆ.
ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕವು ಬೆಂಗಳೂರು ನಗರದ ಆಡಳಿತ ವ್ಯವಸ್ಥೆಯನ್ನು ಸುಧಾರಿಸಲು ಮತ್ತು ವಿಕೇಂದ್ರೀಕೃತ ಆಡಳಿತವನ್ನು ಜಾರಿಗೊಳಿಸುವ ಗುರಿಯನ್ನು ಹೊಂದಿದೆ. ಈ ವಿಧೇಯಕವು ಬಿಬಿಎಂಪಿಯನ್ನು ಐದು ಪಾಲಿಕೆಗಳಾಗಿ ವಿಭಜಿಸುವ ಮತ್ತು ವಾರ್ಡ್‌ಗಳ ಮರುವಿಂಗಡಣೆಯನ್ನು ಒಳಗೊಂಡಿದೆ. ಬಿಬಿಎಂಪಿಯನ್ನು ಐದು ಪ್ರತ್ಯೇಕ ಪಾಲಿಕೆಗಳಾಗಿ ವಿಭಜಿಸುವ ಮೂಲಕ ಆಡಳಿತವನ್ನು ವಿಕೇಂದ್ರೀಕರಿಸುವುದು ಮತ್ತು ಸ್ಥಳೀಯ ಸಮಸ್ಯೆಗಳಿಗೆ ಪರಿಣಾಮಕಾರಿ ಪರಿಹಾರಗಳನ್ನು ಒದಗಿಸುವುದು ಇದರ ಉದ್ದೇಶವಾಗಿದೆ.
ಕನ್ನಡ ನಿಘಂಟಿನಲ್ಲಿ ನಿಮಗೆ ಬೇರೆ ಹೆಸರು ಸಿಗಲಿಲ್ವಾ..? ಎಂದು ವಿಪಕ್ಷ ನಾಯಕ ಆರ್ ಅಶೋಕ್ ಕಿಡಿಕಾರಿದ್ದಾರೆ. ಗ್ರೇಟರ್ ಬದಲು ಕನ್ನಡದ ಹೆಸರಿಸುವಂತೆ ಅಶೋಕ್ ಒತ್ತಾಯಿಸಿದ್ದಾರೆ.