ಬೆಂಗಳೂರು : ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಿನ್ನೆ ಸಚಿವ ಸಂಪುಟ ಸಭೆ ನಡೆದಿದ್ದು, ಸಭೆಯಲ್ಲಿ ಮಹತ್ವದ ಯೋಜನೆಗಳಿಗೆ ಅನುಮೋದನೆ ನೀಡಲಾಯಿತು. ಈ ಬಗ್ಗೆ ಇಲ್ಲಿದೆ ಕಂಪ್ಲೀಟ್ ರಿಪೋರ್ಟ್.
ಸಚಿವ ಸಂಪುಟ ಸಭೆಯ ಹೈಲೆಟ್ಸ್
ದೇವನಹಳ್ಳಿ – ವಿಜಯಪುರ – ಹೆಚ್ ಕ್ರಾಸ್ – ವೇಮಗಲ್ – ಮಾಲೂರು – ತಮಿಳುನಾಡು ಗಡಿವರೆಗೆ 110.4 ಕಿ.ಮೀ. ಉದ್ದದ ರಸ್ತೆಯನ್ನು ಹೈಬ್ರಿಡ್ವರ್ಷಾಸನ ಮಾದರಿಯಲ್ಲಿ ರೂ.3,190 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಆಡಳಿತಾತ್ಮಕ ಅನುಮೋದನೆ
• ರಾಜ್ಯದ ಸರ್ಕಾರಿ ಶಾಲೆಗಳ 4 ಮತ್ತು 5ನೇ ತರಗತಿ ವಿದ್ಯಾರ್ಥಿಗಳಿಗೆ 2024-25ನೇ ಸಾಲಿನ ಕಲಿಕಾ ಸಾಮಾಗ್ರಿಗಳನ್ನು ವಿನ್ಯಾಸಗೊಳಿಸಿ, ಮುದ್ರಿಸಿ, ವಿತರಿಸಲು ಹಾಗೂ ಶಿಕ್ಷಕರಿಗೆ ಅಗತ್ಯ ತರಬೇತಿ ನೀಡುವ ರೂ.14.2 ಕೋಟಿ ವೆಚ್ಚದ “ಓದು ಕರ್ನಾಟಕ” ಚಟುವಟಿಕೆಗೆ ಅನುಮೋದನೆ
. ಬಾಗಲಕೋಟೆ ಜಿಲ್ಲೆಯ ಮುಧೋಳ ನಗರಕ್ಕೆ ಗುಳಬಾಳ ಹಳ್ಳಿ ಹತ್ತಿರದ ಕೃಷ್ಣಾನದಿ ಮೂಲದಿಂದ ಸುಧಾರಿತ ನೀರು ಸರಬರಾಜು ವ್ಯವಸ್ಥೆ ಕಲ್ಪಿಸುವ ರೂ.177 ಕೋಟಿ ವೆಚ್ಚದ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ಮತ್ತು ಅನುದಾನ ಬಿಡುಗಡೆಗೆ ತೀರ್ಮಾನ
ಹಾಸನ ನಗರ ಸಭೆಯನ್ನು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸಲು ನಿರ್ಧಾರ
• ರೂ. 39.07 ಕೋಟಿ ವೆಚ್ಚದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಾಗೂ ಹೊಸದಾಗಿ ಮಂಜೂರಾದ ವಿದ್ಯಾರ್ಥಿ ನಿಲಯಗಳ ಮೂಲ ಸೌಕರ್ಯ ಅಭಿವೃದ್ಧಿಗೆ ನಿರ್ಧಾರ
• ರಾಯಚೂರು ವಿಶ್ವವಿದ್ಯಾಲಯವನ್ನು ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಲು ತೀರ್ಮಾನ.
ಕೇಂದ್ರಗಳು ಮತ್ತು ಜೈವಿಕ ನಿಯಂತ್ರಣ / ಪರತಂತ್ರ ಜೀವಿ ಪ್ರಯೋಗಾಲಯಗಳು ಇವುಗಳನ್ನು ಒಂದೇ ಸೂರಿನಡಿ ತಂದು ಅಭಿವೃದ್ಧಿಪಡಿಸಲು “ಕರ್ನಾಟಕ ರಾಜ್ಯ ಕೃಷಿ ಅಭಿವೃದ್ಧಿ ಏಜೆನ್ಸಿ” ಸ್ಥಾಪನೆಗೆ ನಿರ್ಧಾರ
• ಕೆಎಸ್ಆರ್ಪಿ ಒಂದನೇ ಪಡೆಯ ಆವರಣದಲ್ಲಿ 3.16 ಎಕರೆ ಜಾಗದಲ್ಲಿ ಪೊಲೀಸ್ ಇಲಾಖೆಯ ಸೆಂಟ್ರಲ್ ಕಮಾಂಡ್ ಸೆಂಟರ್ ಒಳಗೊಂಡಂತೆ ಸುಸಂಘಟಿತ ಪೊಲೀಸ್ ಭವನ ನಿರ್ಮಾಣ ಕಾಮಗಾರಿಯ ಪರಿಷ್ಕೃತ ಅಂದಾಜು ರೂ.102 ಕೋಟಿಗೆ ಅನುಮೋದನೆ.
• ಬೆಂಗಳೂರಿನ ಸೂರ್ಯನಗರದ ಒಂದನೇ ಹಂತದ ಬಡಾವಣೆಯಲ್ಲಿ ಕ್ಲಬ್ಹೌಸ್, ಲೈಬ್ರೆರಿ, ಜಿಮ್, ಒಳಾಂಗಣ ಕ್ರೀಡಾಂಗಣ, ಕಾರು ಪಾರ್ಕಿಂಗ್ಗಳನ್ನು ಒಳಗೊಂಡ ಅತ್ಯಾಧುನಿಕ ಬಹುಮಹಡಿ ವಸತಿ ಸಮುಚ್ಚಯವನ್ನು ರೂ.101 ಕೋಟಿ ವೆಚ್ಚದಲ್ಲಿ ಕರ್ನಾಟಕ ಗೃಹ ಮಂಡಳಿ ಮೂಲಕ ನಿರ್ಮಿಸಲು ನಿರ್ಧಾರ.
• ಶಿವಮೊಗ್ಗ ಜಿಲ್ಲೆಯ ಸೋಗಾನೆಯಲ್ಲಿರುವ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣದ ಅಭಿವೃದ್ಧಿಗೆ ರೂ.127.4 ಕೋಟಿ ಹೆಚ್ಚುವರಿ ಅನುದಾನ ನೀಡಲು ತೀರ್ಮಾನ.
ದೇವನಹಳ್ಳಿ – ವಿಜಯಪುರ – ಹೆಚ್ ಕ್ರಾಸ್ – ವೇಮಗಲ್ – ಮಾಲೂರು – ತಮಿಳುನಾಡು ಗಡಿವರೆಗೆ 110.4 ಕಿ.ಮೀ. ಉದ್ದದ ರಸ್ತೆಯನ್ನು ಹೈಬ್ರಿಡ್ವರ್ಷಾಸನ ಮಾದರಿಯಲ್ಲಿ ರೂ.3,190 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಆಡಳಿತಾತ್ಮಕ ಅನುಮೋದನೆ.
• ರಾಜ್ಯದ ಸರ್ಕಾರಿ ಶಾಲೆಗಳ 4 ಮತ್ತು 5ನೇ ತರಗತಿ ವಿದ್ಯಾರ್ಥಿಗಳಿಗೆ 2024-25ನೇ ಸಾಲಿನ ಕಲಿಕಾ ಸಾಮಾಗ್ರಿಗಳನ್ನು ವಿನ್ಯಾಸಗೊಳಿಸಿ, ಮುದ್ರಿಸಿ, ವಿತರಿಸಲು ಹಾಗೂ ಶಿಕ್ಷಕರಿಗೆ ಅಗತ್ಯ ತರಬೇತಿ ನೀಡುವ ರೂ.14.2 ಕೋಟಿ ವೆಚ್ಚದ “ಓದು ಕರ್ನಾಟಕ” ಚಟುವಟಿಕೆಗೆ ಅನುಮೋದನೆ.
. ಬಾಗಲಕೋಟೆ ಜಿಲ್ಲೆಯ ಮುಧೋಳ ನಗರಕ್ಕೆ ಗುಳಬಾಳ ಹಳ್ಳಿ ಹತ್ತಿರದ ಕೃಷ್ಣಾನದಿ ಮೂಲದಿಂದ ಸುಧಾರಿತ ನೀರು ಸರಬರಾಜು ವ್ಯವಸ್ಥೆ ಕಲ್ಪಿಸುವ ರೂ.177 ಕೋಟಿ ವೆಚ್ಚದ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ಮತ್ತು ಅನುದಾನ ಬಿಡುಗಡೆಗೆ ತೀರ್ಮಾನ.
ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಮಾಡಲು ಏಕಸದಸ್ಯ ಆಯೋಗ ರಚನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯು ನಿರ್ಧರಿಸಿದೆ.
ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸರ್ಕಾರವು ಆಯೋಗವೊಂದನ್ನು ರಚನೆ ಮಾಡಲಿದ್ದು, ಈ ಆಯೋಗವು ಮೂರು ತಿಂಗಳಲ್ಲಿ ತನ್ನ ವರದಿಯನ್ನು ಸಲ್ಲಿಕೆ ಮಾಡುವಂತೆ ಸೂಚನೆ ನೀಡಲು ಇಂದಿನ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
https://twitter.com/KarnatakaVarthe/status/1850892342812938286?ref_src=twsrc%5Egoogle%7Ctwcamp%5Eserp%7Ctwgr%5Etweet
https://twitter.com/KarnatakaVarthe/status/1850895508547735656?ref_src=twsrc%5Egoogle%7Ctwcamp%5Eserp%7Ctwgr%5Etweet