
ಏನಿದು ಘಟನೆ
ದಿವ್ಯಾ ಹಾಗೂ ರವಿ ಇಬ್ಬರು ಪ್ರೀತಿಸುತ್ತಿದ್ದು,ಕುಟುಂಬಸ್ಥರ ವಿರೋಧದ ನಡುವೆಯೂ ಮದುವೆಯಾಗಿದ್ದರು. ಸಬ್ ರಿಜಿಸ್ಟಾರ್ ಕಚೇರಿಯಲ್ಲಿ ಇಬ್ಬರು ವಿವಾಹವಾಗಿದ್ದರು. ಆದರೆ ಕೆಲವ ದಿನಗಳ ನಂತರ ದಿವ್ಯಾಳನ್ನು ಪೋಷಕರು ಮನೆಗೆ ಕರೆದುಕೊಂಡು ಹೋಗಿದ್ದರು. ನಂತರ ಬಸ್ ನಿಲ್ದಾಣದ ಬಳಿ ಯುವತಿ ನಡೆದುಕೊಂಡು ಹೋಗುತ್ತಿದ್ದಾಗ ರವಿ ಹಾಗೂ ಆತನ ಸ್ನೇಹಿತರು ಬಂದು ಕಿಡ್ನಾಪ್ ಮಾಡಿದ್ದಾರೆ ಎಂದು ದಿವ್ಯಾ ಪೋಷಕರು ಆರೋಪಿಸಿದ್ದಾರೆ. ಈ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

