HomeLatest NewsBREAKING : ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ ಮಾಡಿದ ಆರೋಪಿ ಗುರುತು ಪತ್ತೆ.!

BREAKING : ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ ಮಾಡಿದ ಆರೋಪಿ ಗುರುತು ಪತ್ತೆ.!

ಬೆಂಗಳೂರು : ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ ಮಾಡಿದ ಆರೋಪಿ ಗುರುತು ಪತ್ತೆಯಾಗಿದ್ದು, ಆತನನ್ನು ಬಂಧಿಸಲು ಬೆಂಗಳೂರು ಪೊಲೀಸರು ಮುಂದಾಗಿದ್ದಾರೆ ಎನ್ನಲಾಗಿದೆ.

ಮಹಾರಾಷ್ಟ್ರದ ಸೊಲ್ಲಾಪುರ ಮೂಲದ ವ್ಯಕ್ತಿಯೋರ್ವ ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ ಮಾಡಿದ್ದು, ದಾನೇಶ್ ನರೋಣ ಎಂಬಾತನನ್ನು ಬಂಧಿಸಲು ಪೊಲೀಸರು ಸಿದ್ದತೆ ನಡೆಸಿದ್ದಾರೆ.

ನನಗೆ ಬೆದರಿಕೆ ಕರೆ ಬರುತ್ತಿದೆ ಎಂದು ಆರೋಪಿಸಿದ್ದ ಸಚಿವ ಸಚಿವ ಪ್ರಿಯಾಂಕ್ ಖರ್ಗೆ ಬೆದರಿಕೆ ಕರೆಯ ವಿಡಿಯೋ ರಿಲೀಸ್ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಸಚಿವ ಪ್ರಿಯಾಂಕ್ ಖರ್ಗೆ ” RSS ಯುವಕರ, ಮಕ್ಕಳ ಮನಸುಗಳಲ್ಲಿ ಕಲ್ಮಶ ತುಂಬುವ ಕೆಲಸ ಮಾಡುತ್ತಿದೆ ಎಂದಿದ್ದೆ, ಅವರು ತುಂಬಿದ ಕಲ್ಮಶವು ಹೇಗಿರುತ್ತದೆ ಎಂಬುದಕ್ಕೆ ಸಣ್ಣ ಉದಾಹರಣೆ ಇಲ್ಲಿದೆ.. ಕೆಲವು ದಿನಗಳಿಂದ ನನಗೆ ನಿರಂತರವಾಗಿ ಬರುತ್ತಿದ್ದ ಬೆದರಿಕೆ ಮತ್ತು ನಿಂದನೆಯ ಕರೆಗಳಲ್ಲಿ ಇದೊಂದು ಸ್ಯಾಂಪಲ್ ಅಷ್ಟೇ. ತಾಯಿ, ಸಹೋದರಿಯರ ಹೆಸರು ಹಿಡಿದು ಅತ್ಯಂತ ತುಚ್ಚವಾಗಿ ನಿಂದಿಸುವುದೇ ಶಾಖೆಗಳಲ್ಲಿ ನೀಡುವ ಸಂಸ್ಕಾರವೇ? ಮೋದಿ ಹಾಗೂ ಮೋಹನ್ ಭಾಗವತ್ ಅವರ ತಾಯಿಯಂದಿರಿಗೆ ಇದೇ ಬಗೆಯಲ್ಲಿ ನಿಂದಿಸುವುದನ್ನು ಮುಂತಾದ ಬಿಜೆಪಿ ನಾಯಕರು ಒಪ್ಪುತ್ತಾರೆಯೇ? ಬಿಜೆಪಿ ನಾಯಕರ ಮಕ್ಕಳು ತಮ್ಮ ಭವ್ಯ ಭವಿಷ್ಯ ರೂಪಿಸಿಕೊಳ್ಳುತ್ತಿದ್ದಾರೆ, ಬಡವರ ಮಕ್ಕಳನ್ನು ಹೀಗೆ ನಿಂದಿಸುವುದಕ್ಕೆ, ಬೆದರಿಸುವುದಕ್ಕೆ ಮತ್ತು ಬಲಿಯಾಗುವುದಕ್ಕೆ ಬಳಸಿಕೊಳ್ಳುತ್ತಿದ್ದಾರೆ. ನಾನು ದೂರು ನೀಡಿದರೆ ಆ ವ್ಯಕ್ತಿಯ ಬದುಕಿನಲ್ಲಿ ಹಾನಿಯಾಗುತ್ತದೆಯೇ ಹೊರತು ಆತನನ್ನು ಇಂತಹ ಮನಸ್ಥಿತಿಗೆ ತಳ್ಳಿದವರಿಗೆ ಯಾವ ಹಾನಿಯೂ ಆಗುವುದಿಲ್ಲ ಎಂದಿದ್ದಾರೆ.

ನಮ್ಮದು ವ್ಯಕ್ತಿಗಳ ವಿರುದ್ಧದ ಹೋರಾಟವಲ್ಲ, RSS ಪಸರಿಸುತ್ತಿರುವ ಈ ಕೊಳಕು ಮನಸ್ಥಿತಿಯ ವಿರುದ್ಧದ ಹೋರಾಟ, ಮುಗ್ದರನ್ನು ಬ್ರೈನ್ ವಾಶ್ ಮಾಡಿ ಅವರ ಚಿಂತನೆಗಳನ್ನು ಕಲುಷಿತಗೊಳಿಸುತ್ತಿರುವ ಕ್ಷುದ್ರ ಶಕ್ತಿಗಳ ವಿರುದ್ಧದ ಹೋರಾಟ. RSS ನ ಕಾಲಾಳುಗಳಾಗಿರುವ ಜನರನ್ನು ವಿಕಾರಧಾರೆಯಿಂದ ವಿಚಾರಧಾರೆಯೆಡೆಗೆ ಕರೆತರಬೇಕಿದೆ, ಬುದ್ಧ, ಬಸವ, ಅಂಬೇಡ್ಕರ್ ಅವರ ಮೌಲ್ಯಯುತ ಚಿಂತನೆಗಳನ್ನು ಪರಿಚಯಿಸಬೇಕಿದೆ. ಮುಗ್ದ ಮಕ್ಕಳು, ಯುವ ಸಮುದಾಯವನ್ನು ಇಂತಹ ಕಲುಷಿತ ವ್ಯವಸ್ಥೆಗೆ ಬಲಿಯಾಗದಂತೆ ತಡೆಯುವ ಸಲುವಾಗಿಯೇ ನಾನು ಹೋರಾಡುತ್ತೇನೆ ಮತ್ತು ದೃಢವಾದ ಹೆಜ್ಜೆಗಳನ್ನು ಇಡುತ್ತೇನೆ. ಈ ಬೆದರಿಕೆಗಳು, ಬೈಗುಳಗಳಿಂದ ನಾನು ವಿಚಲಿತನಾಗುತ್ತೇನೆ ಎಂದು ಭಾವಿಸಿದ್ದರೆ ಅದು ಅವರ ಭ್ರಮೆಯಷ್ಟೇ. ನನ್ನದು ಕೇವಲ ಅಧಿಕಾರ ಕೇಂದ್ರಿತ ರಾಜಕಾರಣವಲ್ಲ, ಸೈದ್ದಾಂತಿಕ ರಾಜಕಾರಣ, ಮುಗ್ದ ಯುವ ಸಮುದಾಯವನ್ನು ವಿಷವರ್ತುಲದಿಂದ ಹೊರತರುವ ಜನಕೇಂದ್ರಿತ ರಾಜಕಾರಣ ಎಂದು ಅವರು ಟ್ವೀಟ್ ಮಾಡಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular