HomeEntertainmentಫೈರ್ ಫ್ಲೈ ಚಿತ್ರದ ನಾಯಕನ ಇಂಟ್ರಡಕ್ಷನ್ ಟೀಸರ್ ರಿಲೀಸ್

ಫೈರ್ ಫ್ಲೈ ಚಿತ್ರದ ನಾಯಕನ ಇಂಟ್ರಡಕ್ಷನ್ ಟೀಸರ್ ರಿಲೀಸ್

ವಂಶಿ ನಟಿಸಿ ನಿರ್ದೇಶಿಸಿರುವ ‘ಫೈರ್ ಫ್ಲೈ’ ಚಿತ್ರದ ಟೀಸರ್ ಇಂದು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದ್ದು, ನಾಯಕನ ಪಾತ್ರವನ್ನು ಪರಿಚಯಿಸಲಾಗಿದೆ. ಈ ಟೀಸರ್ ರಿಲೀಸ್ ಆದ ಕೆಲವೇ ಕ್ಷಣಗಳಲ್ಲಿ ಸಾಕಷ್ಟು ವೀಕ್ಷಣೆ ಪಡೆಯುವುದಲ್ಲದೆ ನೋಡುಗರ ಗಮನ ಸೆಳೆದಿದೆ.

ಈ ಚಿತ್ರವನ್ನು ಶ್ರೀ ಮುತ್ತು ಸಿನಿ  ಕ್ರಿಯೇಷನ್ಸ್ ಬ್ಯಾನರ್ ನಲ್ಲಿ ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣ ಮಾಡಿದ್ದು, ಚರಣ್ ರಾಜ್ ಸಂಗೀತ ಸಂಯೋಜನೆ ನೀಡಿದ್ದಾರೆ. ವಂಶಿ ಸೇರಿದಂತೆ ಸುಧಾ ರಾಣಿ, ಅಚ್ಯುತ್ ಕುಮಾರ್, ಶೀತಲ್ ಶೆಟ್ಟಿ, ರಚನಾ ಇಂದರ್ ಬಣ್ಣ ಹಚ್ಚಿದ್ದಾರೆ. ಸುರೇಶ್ ಆರುಮುಗಂ ಸಂಕಲನ, ರಘು ನಿಡುವಳ್ಳಿ ಅವರ ಸಂಭಾಷಣೆ, ಹಾಗೂ ಅರ್ಜುನ್ ರಾಜ್ ಸಾಹಸ ನಿರ್ದೇಶನವಿದೆ.

For Latest News Updates, Join Our Whatsapp Community🚩
RELATED ARTICLES

Most Popular