HomeLatest NewsBREAKING : ದಾವಣಗೆರೆಯಲ್ಲಿ ಇಂದು ಸಂಜೆ 'ವೀರಶೈವ ಲಿಂಗಾಯತ' ಸಂಪ್ರದಾಯದಂತೆ 'ಶಾಮನೂರು ಶಿವಶಂಕರಪ್ಪ' ಅಂತ್ಯಕ್ರಿಯೆ.!

BREAKING : ದಾವಣಗೆರೆಯಲ್ಲಿ ಇಂದು ಸಂಜೆ ‘ವೀರಶೈವ ಲಿಂಗಾಯತ’ ಸಂಪ್ರದಾಯದಂತೆ ‘ಶಾಮನೂರು ಶಿವಶಂಕರಪ್ಪ’ ಅಂತ್ಯಕ್ರಿಯೆ.!

ಬೆಂಗಳೂರು : ಬೆಂಗಳೂರಿನ ಸ್ಪರ್ಶ ಆಸ್ಪತ್ರೆಯಲ್ಲಿ ಭಾನುವಾರ ಸಂಜೆ ನಿಧನರಾದ ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ, ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಡಾ. ಶಾಮನೂರು ಶಿವಶಂಕರಪ್ಪ ಅವರ ಪಾರ್ಥಿವ ಶರೀರವನ್ನು ದಾವಣಗೆರೆ ನಗರಕ್ಕೆ ತರಲಾಗಿದೆ.

ಇಂದು ಸಂಜೆ ದಾವಣಗೆರೆಯಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಶಾಮನೂರು ಶಿವಶಂಕರಪ್ಪ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿದೆ.

ದಾವಣಗೆರೆಯ ಎಂಸಿಸಿ ಬಿ ಬ್ಲಾಕ್ ನಲ್ಲಿರುವ ಶಾಮನೂರು ಶಿವಶಂಕರಪ್ಪನವರ ನಿವಾಸ ‘ಶಿವ ಪಾರ್ವತಿ’ಯಲ್ಲಿ ಬೆಳಗ್ಗೆ 11 ಗಂಟೆವರೆಗೆ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬೆಳಿಗ್ಗೆ 11 ಗಂಟೆಯ ನಂತರ ದಾವಣಗೆರೆಯ ಹೈಸ್ಕೂಲ್ ಮೈದಾನದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.
ಸಂಜೆ 4 ಗಂಟೆಗೆ ಕಲ್ಲೇಶ್ವರ ಮಿಲ್ ಆವರಣದಲ್ಲಿ ಪತ್ನಿ ದಿವಂಗತ ಪಾರ್ವತಮ್ಮ ಶಿವಶಂಕರಪ್ಪನವರ ಸಮಾಧಿ ಸ್ಥಳದ ಪಕ್ಕದಲ್ಲೇ ಶಾಮನೂರು ಶಿವಶಂಕರಪ್ಪ ಪಾರ್ಥಿವ ಶರೀರದ ಅಂತ್ಯಕ್ರಿಯೆ ನೆರವೇರಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಾಮನೂರು ಶಿವಶಂಕರಪ್ಪ ಅಂತಿಮ ದರ್ಶನಕ್ಕೆ ಜನಸಾಗರ ಹರಿದು ಬಂದಿದೆ. ಎಸ್.ಎಸ್. ಮಲ್ಲಿಕಾರ್ಜುನ ನಿವಾಸದಲ್ಲಿ ಶಾಮನೂರು ಶಿವಶಂಕರಪ್ಪ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸರದಿ ಸಾಲಿನಲ್ಲಿ ನಿಂತು ಜನರು ಅಂತಿಮ ದರ್ಶನ ಪಡೆದುಕೊಳ್ಳುತ್ತಿದ್ದಾರೆ. ಪೂಜೆ ನೆರವೇರಿಸಿದ ಬಳಿಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, 3 ಕಡೆ ಸಾರ್ವಜನಿಕ ದರ್ಶನಕ್ಕೆ ಅಂತಿಮ ವ್ಯವಸ್ಥೆ ಮಾಡಲಾಗಿದೆ. ಮನೆಯಲ್ಲಿ ಅಂತಿಮ ದರ್ಶನದ ನಂತರ ಹೈಸ್ಕೂಲ್ ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 12:30ಕ್ಕೆ ಹೈಸ್ಕೂಲ್ ಮೈದಾನಕ್ಕೆ ಶಿಫ್ಟ್ ಮಾಡಲಾಗುವುದು. ಮೆರವಣಿಗೆ ಮೂಲಕ ಪಾರ್ಥಿವ ಶರೀರವನ್ನು ಕಲ್ಲೇಶ್ವರ ರೈಸ್ ಮಿಲ್ ಆವರಣಕ್ಕೆ ತರಲಾಗುವುದು. ಸಂಜೆ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಲಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular