ದಾವಣಗೆರೆ : ಮಾಜಿ ಸಚಿವರು ಹಾಗೂ ಶಾಸಕರಾದ ಡಾ. ಶಾಮನೂರು ಶಿವಶಂಕರಪ್ಪ ನಿಧನರಾಗಿದ್ದು, ಅವರ ಪಾರ್ಥಿವ ಶರೀರವನ್ನು ಇಂದು ಸೋಮವಾರ ದಾವಣಗೆರೆ ಮನೆಯಲ್ಲಿ ಬೆಳಗ್ಗೆ 7 ಗಂಟೆಯಿಂದ 10.30 ಗಂಟೆ ತನಕ ಪೂಜೆ ಹಾಗೂ ಕುಟುಂಬಸ್ಥರಿಗೆ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ದಾವಣಗೆರೆ ಹೈ ಸ್ಕೂಲ್ ಮೈದಾನದಲ್ಲಿ ಸೋಮವಾರ ಮಧ್ಯಾಹ್ನ12 ಗಂಟೆಯಿಂದ – 3 ಗಂಟೆವರೆಗೆ ಸಾರ್ವಜನಿಕರಿಗೆ ಅಂತಿಮದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಪತ್ನಿಪಾರ್ವತಮ್ಮ ಸಮಾಧಿ ಪಕ್ಕದಲ್ಲೇ ‘ಶಾಮನೂರು ಶಿವಶಂಕರಪ್ಪ’ ಅಂತ್ಯ ಸಂಸ್ಕಾರ ನಡೆಯಲಿದೆ.
ಇಂದು ಸಂಜೆ 4.30 ಗಂಟೆಗೆ ಅಂತಿಮ ವಿಧಿವಿಧಾನಗಳನ್ನು ದಾವಣಗೆರೆಯ ಬಂಬೂಬಜಾರ್ ರಸ್ತೆಯ ಕಲ್ಲೇಶ್ವರ ಮಿಲ್ ಆವರಣದಲ್ಲಿ ನೆರವೇರಲಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ.

