HomeKarnatakaBREAKING : ಕಾನೂನು ಎಲ್ಲರಿಗೂ ಒಂದೇ, ಎಲ್ಲರಿಗೂ ಒಂದೇ ರೀತಿ ಶಿಕ್ಷೆ ಆಗುತ್ತದೆ : ಸಚಿವ...

BREAKING : ಕಾನೂನು ಎಲ್ಲರಿಗೂ ಒಂದೇ, ಎಲ್ಲರಿಗೂ ಒಂದೇ ರೀತಿ ಶಿಕ್ಷೆ ಆಗುತ್ತದೆ : ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ : ಕಾನೂನು ಎಲ್ಲರಿಗೂ ಒಂದೇ, ಎಲ್ಲರಿಗೂ ಒಂದೇ ರೀತಿ ಶಿಕ್ಷೆ ಆಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ಶಿವಮೊಗ್ಗ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಮಧು ಬಂಗಾರಪ್ಪ ಗಲಾಟೆ ಸಂದರ್ಭದಲ್ಲಿ ಯಾರಿಗೂ ಗಂಭೀರ ಗಾಯಗಳಾಗಿಲ್ಲ, ಸಣ್ಣಪುಟ್ಟ ಗಾಯಗಳಾಗಿವೆ. ತಲ್ವಾರ್ , ಖಡ್ಗದಿಂದ ಯಾರ ಮೇಲೂ ದಾಳಿ ಆಗಿಲ್ಲ.   ಈ ಘಟನೆಯಲ್ಲಿ ಯಾರೇ ಭಾಗಿಯಾಗಿದ್ದರೂ ಬಿಡುವ ಪ್ರಶ್ನೆಯೇ ಇಲ್ಲ ಕಾನೂನು ಎಲ್ಲರಿಗೂ ಒಂದೇ, ಎಲ್ಲರಿಗೂ ಒಂದೇ ರೀತಿ ಶಿಕ್ಷೆ ಆಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ಕಲ್ಲು ತೂರಾಟ ಗಲಾಟೆ ಪ್ರಕರಣ ಸಂಬಂಧ ಸಂಪೂರ್ಣ ಮಾಹಿತಿ ಕಲೆ ಹಾಕುತ್ತೇವೆ. ಗಲಾಟೆಯಲ್ಲಿ ಭಾಗಿಯಾದ ಯಾರನ್ನೂ ಬಿಡಲ್ಲ. ಎಲ್ಲರಿಗೂ ಒಂದೇ ರೀತಿ ಶಿಕ್ಷೆ ನೀಡಲಾಗುತ್ತದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಿವಮೊಗ್ಗದ ರಾಗಿಗುಡ್ಡ ಶಾಂತಿನಗರ ಬಡಾವಣೆಯಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ 24 ಎಫ್ಐಆರ್ ದಾಖಲಿಸಿ 60 ಹೆಚ್ಚು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular