BREAKING : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ‘ಲಾರಿ ಮುಷ್ಕರ’ ವಾಪಸ್ ಪಡೆಯುವುದಿಲ್ಲ : ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ಸ್ಪಷ್ಟನೆ

ಬೆಂಗಳೂರು : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಲಾರಿ ಮುಷ್ಕರ ವಾಪಸ್ ಪಡೆಯುವುದಿಲ್ಲ ಎಂದು ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ಹೇಳಿದ್ದಾರೆ.

ಡೀಸೆಲ್ ಬೆಲೆ ಏರಿಕೆ ಮಾಡಲಾಗಿದೆ. ಬೆಲೆ ಏರಿಕೆ ವಾಪಸ್ ಪಡೆಯುವವರೆಗೂ ನಾವು ಮುಷ್ಕರ ನಿಲ್ಲಿಸಲ್ಲ. ಯಾವುದೇ ಕಾರಣಕ್ಕೂ ಲಾರಿ ಮುಷ್ಕರ ವಾಪಸ್ ಪಡೆಯುವುದಿಲ್ಲ ಎಂದು ಅವರು ಹೇಳಿದರು.
ಐದು ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಲಾರಿ ಮಾಲೀಕರ ಸಂಘ ಮುಷ್ಕರಕ್ಕೆ ಕರೆ ನೀಡಿದ್ದು, ಇಂದು ನಿನ್ನೆ ಮಧ್ಯರಾತ್ರಿಯಿಂದಲೇ ರಾಜ್ಯಾದ್ಯಂತ ಲಾರಿ ಮುಷ್ಕರ ಆರಂಭವಾಗಿದೆ. ಸರಕು ಸಾಗಾಣೆಯಲ್ಲಿ ಭಾರಿ ವ್ಯತ್ಯಯವುಂಟಾಗುತ್ತಿದೆ.

ಇದರ ಬೆನ್ನಲ್ಲೇ ಲಾರಿ ಮಾಲೀಕರ ಸಂಘದ ಜೊತೆ ರಾಜ್ಯ ಸರ್ಕಾರ ಮಾತುಕತೆಗೆ ಮುಂದಾಗಿದ್ದು, ಈ ನಿಟ್ಟಿನಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಜೊತೆ ಸಭೆ ನಡೆಸಲಾಗಿದೆ. ಆದರೆ ಸಚಿವರೊಂದಿಗಿನ ಮೊದಲ ಸುತ್ತಿನ ಮಾತುಕತೆ ವಿಫಲವಾಗಿದ್ದು, ಲಾರಿ ಮಾಲೀಕರು ಮುಷ್ಕರದಿಂದ ಹಿಂದೆ ಸರಿಯಲ್ಲ ಎಂದಿದ್ದಾರೆ.ಸಂಜೆ ೫:೩೦ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ಕರೆದಿದ್ದು, ಸಿಎಂ ಕಾವೇರಿ ನಿವಾಸದಲ್ಲಿ ಲಾರಿ ಮಾಲೀಕರು ಮತ್ತೊಂದು ಸುತ್ತಿನ ಮಾತುಕತೆ ನಡೆಸಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read