ನಾಳೆ ಪ್ರೇಮಿಗಳ ದಿನದಂದು ಬಿಡುಗಡೆಯಾಗಲಿದೆ ‘ಯುದ್ಧ ಕಾಂಡ’ ಚಿತ್ರದ ಲಿರಿಕಲ್ ಹಾಡು

ಅಜಯ್ ರಾವ್ ಅಭಿನಯದ ಪವನ್ ಭಟ್ ನಿರ್ದೇಶನದ ‘ಯುದ್ಧಕಾಂಡ’ ಚಿತ್ರದ ‘ನೀ ಬಂದು ನಿಂತೆ’ ಎಂಬ ಲಿರಿಕಲ್ ಹಾಡು ನಾಳೆ ಪ್ರೇಮಿಗಳ ದಿನದಂದು ಬಿಡುಗಡೆಯಾಗುತ್ತಿದೆ. ಈ ಕುರಿತು ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ಘೋಷಣೆ ಮಾಡಿದೆ.

ಈ ಚಿತ್ರವನ್ನು ಶ್ರೀ ಕೃಷ್ಣ ಆರ್ಟ್ಸ್ ಅಂಡ್ ಕ್ರಿಯೇಷನ್ಸ್ / ಅಜಯ್ ರಾವ್ ಪ್ರೊಡಕ್ಷನ್ಸ್ ಬ್ಯಾನರ್ ನಲ್ಲಿ ನಿರ್ಮಾಣ ಮಾಡಲಾಗಿದ್ದು, ಅಜಯ್ ರಾವ್ ಸೇರಿದಂತೆ ಅರ್ಚನಾ ಜೋಯಿಸ್, ಪ್ರಕಾಶ್ ಬೆಳವಾಡಿ ಬಣ್ಣ ಹಚ್ಚಿದ್ದಾರೆ. ಶ್ರೀ ಕ್ರೇಜಿ ಮೈಂಡ್ಜ್  ಸಂಕಲನ ಹಾಗೂ ಕಾರ್ತಿಕ್ ಶರ್ಮಾ ಛಾಯಾಗ್ರಹಣವಿದೆ. ಹೇಮಂತ್ ಜೋಯಿಸ್ ಸಂಗೀತ ಸಂಯೋಜನೆ ನೀಡಿದ್ದು, ಈ ಸಿನಿಮಾದಲ್ಲಿ ಅಜಯ್ ರಾವ್ ಲಾಯರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಬಹುತೇಕ ಶೂಟಿಂಗ್ ಪೂರ್ಣಗೊಳಿಸಿರುವ ಚಿತ್ರತಂಡ ಇನ್ನೇನು ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡುವ ನಿರೀಕ್ಷೆಯಲ್ಲಿದೆ.

 

View this post on Instagram

 

A post shared by A2 Music (@a2musicsouth)

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read