HomeEntertainment'ರತ್ನ' ಚಿತ್ರದ ಲಿರಿಕಲ್ ಹಾಡು ರಿಲೀಸ್

‘ರತ್ನ’ ಚಿತ್ರದ ಲಿರಿಕಲ್ ಹಾಡು ರಿಲೀಸ್

ಬಸವರಾಜ್ ಬಳ್ಳಾರಿ ನಿರ್ದೇಶನದ ‘ರತ್ನ’ ಚಿತ್ರದ ಲಿರಿಕಲ್ ಹಾಡು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ”ಮೊದಲ ದಿನದ ಮಾತು” ಎಂಬ ಈ ಹಾಡಿಗೆ ರಾಜೇಶ್ ಕೃಷ್ಣನ್ ಮತ್ತು ಶ್ರುತಿ ಪ್ರಹ್ಲಾದ್ ಧ್ವನಿಯಾಗಿದ್ದು, ಸತೀಶ್ ಬಾಬು ಸಂಗೀತ ಸಂಯೋಜನೆ ನೀಡಿದ್ದಾರೆ. ನಿರ್ದೇಶಕ ಬಸವರಾಜ್ ಸಾಹಿತ್ಯವಿದೆ.

ಫ್ಯಾಮಿಲಿ ಡ್ರಾಮಾ ಕಥಾಹಂದರ ಹೊಂದಿರುವ ಈ ಚಿತ್ರವನ್ನು ನಿರ್ದೇಶಕ ಬಸವರಾಜ್ ಬಳ್ಳಾರಿ ತಮ್ಮ ಬಸವರಾಜ್ ಬಳ್ಳಾರಿ ಸಿನಿಮಾಸ್ ಬ್ಯಾನರ್ ನಲ್ಲಿ ನಿರ್ಮಾಣ ಮಾಡಿದ್ದು, ಹರ್ಷಾಲ ಹನಿ ಮತ್ತು ವರ್ಧನ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಎಸ್ ಕೆ ನಾಗೇಂದ್ರ ಅರಸ್ ಸಂಕಲನ, ಸತೀಶ್ ಗಂಗಾವತಿ ಛಾಯಾಗ್ರಹಣವಿದೆ.

For Latest News Updates, Join Our Whatsapp Community🚩
RELATED ARTICLES

Most Popular