‘ವಾಮನ’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

‘ವಾಮನ’ ಚಿತ್ರದ ಶೂಟಿಂಗ್ ಇನ್ನೇನು ಕೊನೆಯ ಹಂತದಲ್ಲಿದ್ದು, ಸಿನಿ ಪ್ರೇಕ್ಷಕರಿಗೆ ಒಂದರ ಮೇಲೊಂದು ಸಿಹಿ ಸುದ್ದಿಯನ್ನು ನೀಡುತ್ತಲೇ ಇದೆ. ಇತ್ತೀಚೆಗಷ್ಟೇ ಆಕ್ಷನ್ ಟೀಸರ್ ಮೂಲಕ ಸಾಕಷ್ಟು ನಿರೀಕ್ಷೆ ಮಾಡಿಸಿರುವ ಈ ಸಿನಿಮಾದ ಲಿರಿಕಲ್ ಸಾಂಗ್ ಅನ್ನು ಇಂದು ಏಟು ಮ್ಯೂಸಿಕ್ youtube ಚಾನೆಲ್ ನಲ್ಲಿ ಬಿಡುಗಡೆ ಮಾಡಲಿದ್ದಾರೆ. ‘ಇಳಿ ಸಂಜೆ ಕಡಲ ತೀರ’ ಎಂಬ ಈ ಹಾಡು ಇಂದು ಸಂಜೆ 4-11ಕ್ಕೆ ರಿಲೀಸ್ ಆಗಿದೆ.

ದನ್ವೀರ್ ಗೌಡ ಅಭಿನಯದ ಆಕ್ಷನ್ ಲವ್ ಸ್ಟೋರಿ ಕಥಾಂದರ ಹೊಂದಿರುವ ಈ ಸಿನಿಮಾವನ್ನು ಶಂಕರ್ ರಾಮನ್  ನಿರ್ದೇಶಿಸಿದ್ದು, ಇಕ್ವೀನೋಕ್ಸ್ ಗ್ಲೋಬಲ್ ಎಂಟರ್ಟೈನ್ಮೆಂಟ್ ಬ್ಯಾನರ್ ನಡಿ ಚೇತನ್ ಗೌಡ ನಿರ್ಮಾಣ ಮಾಡಿದ್ದಾರೆ.

ಏಕ್ ಲವ್ ಯಾ ಸಿನಿಮಾ ಖ್ಯಾತಿಯ ರೀಷ್ಮಾ ನಾಣಯ್ಯ ನಾಯಕಿಯಾಗಿ ಅಭಿನಯಿಸಿದ್ದಾರೆ. ಇನ್ನುಳಿದಂತೆ ಸಂಪತ್ ರಾಜ್, ಆದಿತ್ಯ ಮೆನನ್, ಅಚ್ಯುತ್ ಕುಮಾರ್, ಅವಿನಾಶ್, ತಾರಾ, ಭೂಷಣ್, ಪೆಟ್ರೋಲ್ ಪ್ರಸನ್ನ, ಶಿವರಾಜ್ ಕೆಆರ್ ಪೇಟೆ ಸೇರಿದಂತೆ ಮೊದಲಾದ ಕಲಾವಿದರು ತೆರೆ ಹಂಚಿಕೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read