ಬೆಂಗಳೂರು: ರಾಜ್ಯದ ವಿವಿಧೆಡೆ ಮತ್ತೆ ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ. ಆಗಸ್ಟ್ 17ರಿಂದ ಕರಾವಳಿ ಭಾಗದಲ್ಲಿ ಧಾರಾಕಾರ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.
ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ ಮತ್ತು ಶನಿವಾರ ಭಾರಿ ಮಳೆಯಾಗುವ ಸಂಭವವಿದ್ದು, ಭಾನುವಾರದಿಂದ ಮಳೆಯ ತೀವ್ರತೆ ಹೆಚ್ಚಾಗಲಿದೆ. ಈ ಜಿಲ್ಲೆಗಳಿಗೆ ಮುಂದಿನ ಮೂರು ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಒಡನಾಡಿನ ಜಿಲ್ಲೆಗಳಲ್ಲಿ ಶುಕ್ರವಾರ, ಶನಿವಾರ ಸಾಧಾರಣ ಮಳೆಯಾಗುವ ಸಂಭವ ಇದೆ. ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಯ ಹಲವೆಡೆ ಭಾನುವಾರದಿಂದ ಭಾರಿ ಮಳೆ ಆಗುವ ಸಂಭವ ಇದೆ.
ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಯ ಹಲವೆಡೆ ಶುಕ್ರವಾರ ಭಾರಿ ಮಳೆ ಆಗುವ ಸಾಧ್ಯತೆ ಇದೆ. ಉಳಿದಂತೆ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.