HomeLatest Newsರಾಜ್ಯದಲ್ಲಿ ಸೆ. 11ರಿಂದ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ: 'ಯೆಲ್ಲೋ ಅಲರ್ಟ್'

ರಾಜ್ಯದಲ್ಲಿ ಸೆ. 11ರಿಂದ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ: ‘ಯೆಲ್ಲೋ ಅಲರ್ಟ್’

ಬೆಂಗಳೂರು: ರಾಜ್ಯಾದ್ಯಂತ ಕಳೆದ ಎರಡು ಮೂರು ದಿನಗಳಿಂದ ಮಳೆಯ ಪ್ರಮಾಣ ಕಡಿಮೆಯಾಗಿದೆ. ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಿದೆ.

ಕರ್ನಾಟಕದಲ್ಲಿ ಮುಂದಿನ ಮೂರು ದಿನದ ನಂತರ ಮತ್ತೆ ಮಳೆ ಹೆಚ್ಚಾಗಲಿದೆ. ಕರಾವಳಿ ಪ್ರದೇಶದಲ್ಲಿ ಸಾಧಾರಣ ಮಳೆಯಾಗಲಿದ್ದು, ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಭಾರಿ ಮಳೆಯಾಗುವ ಸಂಭವ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಸೆಪ್ಟೆಂಬರ್ 11 ರಿಂದ ರಾಜ್ಯದ ಬಹುತೇಕ ಕಡೆಗಳಲ್ಲಿ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಲಬುರಗಿ, ಬೀದರ್, ವಿಜಯಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಿವಮೊಗ್ಗ, ಮೈಸೂರು, ವಿಜಯನಗರ, ಕೊಡಗು, ಮಂಡ್ಯ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಾಮರಾಜನಗರ, ಕೊಪ್ಪಳ, ರಾಯಚೂರು, ಯಾದಗಿರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಸಾಧಾರಣ ಮಳೆ ಆಗಲಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular