ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಬಿಸಿಯೂಟದಲ್ಲಿ ಸಿರಿಧಾನ್ಯ ಬಳಕೆಗೆ ಕೇಂದ್ರ ಸರ್ಕಾರ ನಿರ್ದೇಶನ

ನವದೆಹಲಿ: ವಿದ್ಯಾರ್ಥಿಗಳಿಗೆ ನೀಡುವ ಊಟದಲ್ಲಿ ಸಿರಿಧಾನ್ಯ ಬಳಸುವಂತೆ ದೇಶದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಶಿಕ್ಷಣ ಸಚಿವಾಲಯ ನಿರ್ದೇಶನ ನೀಡಿದೆ.

ವಿದ್ಯಾರ್ಥಿಗಳಿಗೆ ಸಿರಿಧಾನ್ಯದ ಬಗ್ಗೆ ಅರಿವು ಮೂಡಿಸಬೇಕು. ಅದರ ಮಹತ್ವ ತಿಳಿಸಲು ಎಲ್ಲಾ ಶಾಲೆಗಳಲ್ಲಿ ಮಕ್ಕಳಿಗೆ ನೀಡುವ ಊಟದಲ್ಲಿ ಸಿರಿಧಾನ್ಯ ಬಳಸಬೇಕು ಎಂದು ಹೇಳಲಾಗಿದೆ.

ವಿಶ್ವಸಂಸ್ಥೆ 2023 ಅಂತರರಾಷ್ಟ್ರೀಯ ಸಿರಿಧಾನ್ಯ ವರ್ಷ ಎಂದು ಘೋಷಿಸಿದ ಹಿನ್ನೆಲೆಯಲ್ಲಿ ಮಕ್ಕಳಿಗೆ ಪೌಷ್ಟಿಕ ಆಹಾರದ ಕುರಿತು ಜಾಗೃತಿ ಮೂಡಿಸಲು ಸರ್ಕಾರ ಉಪಕ್ರಮ ಘೋಷಿಸಿದೆ. ಪ್ರತಿ ತಿಂಗಳು ಮಕ್ಕಳ ಆಹಾರದ ಟೈಮ್ ಟೇಬಲ್ ನಲ್ಲಿ ಸಿರಿಧಾನ್ಯಗಳನ್ನು ಅಳವಡಿಸುವಂತೆ ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read