‘ಒಂದು ಸರಳ ಪ್ರೇಮಕಥೆ’ ಚಿತ್ರಕ್ಕೆ ಫಿದಾ ಆದ ಸಿನಿ ಪ್ರೇಕ್ಷಕರು

ಫೆಬ್ರವರಿ ಎಂಟರಂದು ಬಿಡುಗಡೆಯಾಗಿದ್ದ ವಿನಯ್ ರಾಜಕುಮಾರ್ ಅಭಿನಯದ ‘ಒಂದು ಸರಳ ಪ್ರೇಮ ಕಥೆ’  ಎರಡು ವಾರಗಳನ್ನು ಪೂರೈಸಿ ರಾಜ್ಯದೆಲ್ಲೆಡೆ ಯಶಸ್ವಿ ಪ್ರದರ್ಶನ ಕಾಣುತ್ತಿದೆ.  ಈ ಸಿನಿಮಾದ ಅದ್ಭುತ ಕಥೆಗೆ ಪ್ರೇಕ್ಷಕ ಪ್ರಭುಗಳು ಫಿದಾ ಆಗಿದ್ದಾರೆ. ಲವ್ ಸ್ಟೋರಿ ಜೊತೆಗೆ ಸಸ್ಪೆನ್ಸ್ ಥ್ರಿಲ್ಲರ್ ಹೊಂದಿರುವ ಈ ಚಿತ್ರ ಪ್ರೇಕ್ಷಕರ ಮನ ಮುಟ್ಟುವಲ್ಲಿ ಯಶಸ್ವಿಯಾಗಿದೆ.

ಸಿಂಪಲ್ ಸುನಿ ನಿರ್ದೇಶನದ ಈ ಚಿತ್ರದಲ್ಲಿ ವಿನಯ್ ರಾಜಕುಮಾರ್, ಮಲ್ಲಿಕಾಸಿಂಗ್ ಮತ್ತು ಸ್ವಾತಿಷ್ಟ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದು, ರಾಮ್ ಮೂವೀಸ್ ಬ್ಯಾನರ್ ನಲ್ಲಿ ಮೈಸೂರು ರಮೇಶ್ ನಿರ್ಮಾಣ ಮಾಡಿದ್ದಾರೆ. ವೀರ ಸಮರ್ಥ್ ಸಂಗೀತ ಸಂಯೋಜನೆ ನೀಡಿದ್ದು, ಆದಿ ಸಂಕಲನ, ಕಾರ್ತಿಕ್ ಶರ್ಮಾ ಮತ್ತು ಸಭಾ ಕುಮಾರ್ ಛಾಯಾಗ್ರಹಣವಿದೆ. ಈ ಚಿತ್ರದ ಎಲ್ಲಾ ಹಾಡುಗಳು ಈಗಾಗಲೇ ಸೂಪರ್ ಡೂಪರ್ ಹಿಟ್ ಆಗಿವೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read